ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಅಭಿವಿನ್ಯಾಸ ಹಾಗೂ ಅಭಿನಂದನಾ ಸಮಾರಂಭ

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ (Freshrs day) ಹಾಗೂ ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ.ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಕುಂದಾಪುರದ ಮೊಗವೀರ ಭವನದಲ್ಲಿ ಆಯೋಜಿಸಲಾಯಿತು.

ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕುಂದಾಪುರದ ಆದರ್ಶ ಆಸ್ಪತ್ರೆಯ ಎಮ್.ಡಿ.ಡಾ|ಆದರ್ಶ ಹೆಬ್ಬಾರ್ ಮಾತನಾಡಿ ಶಿಕ್ಷಣ, ಕ್ರೀಡೆ,ಕಲೆ,ಸಾಹಿತ್ಯದ ಸಂಗಮವೇ ನಿಜವಾದ ಶಿಕ್ಷಣ ವಿದ್ಯಾರ್ಥಿಗಳು ಸರ್ವತೋಮುಖ ಬೆಳವಣಿಗೆಯಾಗಬೇಕೆಂದು ಶುಭ ಹಾರೈಸಿದರು.

 

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಬ್ರಹ್ಮಣ್ಯ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಜನತಾ ಕಾಲೇಜಿನ ಶೈಕ್ಷಣಿಕ ಕೊಡುಗೆ ಅತೀ ಅಮೂಲ್ಯವಾದದ್ದು ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡು ಉತ್ತಮ ನಾಗರೀಕರಾಗಿ ಹೊರಹೊಮ್ಮಿ ಎಂದು ಶುಭ ಹಾರೈಸಿದರು.

 

ಕಾಲೇಜಿನ ಶೈಕ್ಷಣಿಕ ಮಾರ್ಗದರ್ಶಕಿ ಚಿತ್ರಾ ಕಾರಂತ್ ಭವಿಷ್ಯದ ಬಹುಪಯೋಗಿ ವಿವಿಧ ಕೋರ್ಸ್‌ ಗಳ ಕುರಿತು ಮಾತನಾಡಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಗುಣಮಟ್ಟದ ಶಿಕ್ಷಣ ಅತೀ ಮುಖ್ಯ ಎಂದು ಮಾರ್ಗದರ್ಶನ ನೀಡಿದರು.

 

ಕಳೆದ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ವಾರ್ಷಿಕ ಫಲಿತಾಂಶ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಲಾಯಿತು‌.

ಸಮಾರಂಭದಲ್ಲಿ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕ ಮಂಜು ಕಾಳಾವರ, ಕಾಲೇಜಿನ ಉಪ ಪ್ರಾಂಶುಪಾಲ ರಮೇಶ್ ಪೂಜಾರಿ, ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿದ್ಯಾರ್ಥಿ ಗಣೇಶ್ ಹಾಗೂ ಕಾರ್ಯದರ್ಶಿ ಸಿಂಚನಾ ಆರ್ ರಾವ್ ,ವಿದ್ಯಾರ್ಥಿ ಪೋಷಕರು,ಕಾಲೇಜಿನ ಬೋಧಕ,ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುತ ಪಡಿಸಿದರು.

ಪ್ರಾಂಶುಪಾಲ   ಗಣೇಶ ಮೊಗವೀರ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಉಪನ್ಯಾಸಕ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿ, ಉಪ ಪ್ರಾಂಶುಪಾಲ ರಮೇಶ್ ಪೂಜಾರಿ ವಂದಿಸಿದರು.