ಕಾಪು: ಅ.15 ರಿಂದ 24 ರ ವರೆಗೆ ಉಚ್ಚಿಲ ಶ್ರೀಮಹಾಲಕ್ಷ್ಮಿ ದೇವಸ್ಥಾನದಲ್ಲಿ ದ್ವಿತೀಯ ಉಚ್ಚಿಲ ದಸರಾ ಕಾರ್ಯಕ್ರಮವು ಸಂಭ್ರಮದಿಂದ ಜರುಗಲಿದ್ದು, ಅದರ ಪೂರ್ವಾಭಾವಿ ಸಭೆಯು ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಡಾ. ಜಿ.ಶಂಕರ್ ಅಧ್ಯಕ್ಷತೆಯಲ್ಲಿ ಜರುಗಿತು.
ಕಳೆದ ವರ್ಷ ಜೀರ್ಣೋದ್ಧಾರ ನಡೆದ ಬಳಿಕ ಕ್ಷೇತ್ರವು ಪ್ರವಾಸೋದ್ಯಮ ಕ್ಷೇತ್ರವಾಗಿ ಬೆಳೆಯುತ್ತಿದೆ. ಈ ಬಾರಿ ಮೈಸೂರು ದಸರಾ ಮಾದರಿಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಯೋಜಿಸಲು ಉದ್ದೇಶಿಸಲಾಗಿದೆ ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.
ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ ಕ್ಷೇತ್ರದ ಜೀರ್ಣೋದ್ಧಾರದ ಬಳಿಕ ಮೊಗವೀರ ಸಮಾಜದ ಶಕ್ತಿ ವೃದ್ದಿಯಾಗಿದ್ದು, ದಸರಾ ಸಹಿತ ಎಲ್ಲಾ ಕಾರ್ಯಕ್ರಮಗಳಲ್ಲಿ ಎಲ್ಲರೂ ಭಾಗವಹಿಸಬೇಕು ಎಂದರು.
ದೇವಳದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.