ಉಡುಪಿ: ನಾಳೆ ಸಿಎಂ ಸಿದ್ದರಾಮಯ್ಯ ಅವರು ದ.ಕ ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಹೆಜಮಾಡಿ ಟೋಲ್ ಗೇಟ್ ಬಳಿ ಉಡುಪಿ ಜಿಲ್ಲಾ ಕಾಂಗ್ರೆಸ್ ಭರ್ಜರಿಯಾಗಿ ಸ್ವಾಗತಿಸಲಿದೆ.
ಜಿಲ್ಲೆಯ ಕಾಂಗ್ರೆಸ್ ಪದಾಧಿಕಾರಿಗಳು, ನಾಯಕರು, ಬ್ಲಾಕ್ ಅಧ್ಯಕ್ಷರು, ಎಲ್ಲ ಘಟಕಗಳ ಅಧ್ಯಕ್ಷರು ಸಮಿತಿ ಸದಸ್ಯರು, ಹಾಗೂ ಕಾರ್ಯಕರ್ತರು ಹಾಜರಿದ್ದು, ಬೆಳಿಗ್ಗೆ 11 ಗಂಟೆಗೆ ಹೆಜಮಾಡಿ ಟೋಲ್ ಗೇಟ್ ಬಳಿ ಉಪಸ್ಥಿತರಿರಲು ಸೂಚಿಸಲಾಗಿದೆ.
ನಾಳೆ ಮಧ್ಯಾಹ್ನ ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿರುವ ಸಿಎಂ, ಬಳಿಕ ಸಂಜೆ ಮಂಗಳೂರಿಗೆ ತೆರಳಿ ದ.ಕ ಜಿಲ್ಲಾ ಪಂಚಾಯತ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ತದನಂತರ ಬೆಂಗಳೂರಿಗೆ ವಾಪಾಸಾಗಲಿದ್ದಾರೆ.