ಹಿರಿಯಡಕ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜು. 31 ರಂದು ನಡೆದ IMA-KSB DOCTORS DAY AWARD – 2023 ಪ್ರಶಸ್ತಿ ಪುರಸ್ಕೃತ ಡಾ. ದೇವದಾಸ್ ಕಾಮತ್ ಅವರ ಅಭಿನಂದನಾ ಸಮಾರಂಭದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಬಿ.ಎಲ್ ವಿಶ್ವಾಸ್ ಭಟ್, ಅಮೋಘ (ರಿ.) ಹಿರಿಯಡಕದ ನಿರ್ದೇಶಕಿ ಪೂರ್ಣಿಮಾ ಸುರೇಶ್, ಶಾಲಾ ಮುಖ್ಯ ಶಿಕ್ಷಕರು, ಪ್ರಾಂಶುಪಾಲರು, ಅಧ್ಯಾಪಕರು ಹಾಗೂ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.