ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ಜಾತಿ ಮೀಸಲಾತಿ ಪಟ್ಟಿಯ ಪ್ರವರ್ಗ-1 ರಲ್ಲಿರುವ ಮೊಗೇರ್ ಜಾತಿಯು
ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಸೇರಿರುವ ಹಿನ್ನೆಲೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸರ್ಕಾರದ ಆದೇಶದಂತೆ ಮೊಗೇರ್ ಜಾತಿಯನ್ನು ಕೈಬಿಡುವ ಬಗ್ಗೆ ಸಾರ್ವಜನಿಕರು/ ಸಂಘ ಸಂಸ್ಥೆಗಳಿಂದ ಆಕ್ಷೇಪಣೆ/ ತಕರಾರುಗಳನ್ನು ಆಹ್ವಾನಿಸಲಾಗಿದೆ.
ಆಕ್ಷೇಪಣೆಗಳೇನಾದರೂ ಇದ್ದಲ್ಲಿ, ಪ್ರಕಟಣೆಯ 10 ದಿನಗಳ ಒಳಗಾಗಿ ಸಂಬಂಧಿಸಿದ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಇವರಿಗೆ ಲಿಖಿತ ರೂಪದಲ್ಲಿ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.