ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡಿನ ರಾಜ್ಯದಲ್ಲಿ ಈ ಹುದ್ದೆ ನೇಮಕಾತಿ ನಡೆಯಲಿದೆ. 10ನೇ ತರಗತಿ ಮತ್ತು ಐಟಿಐ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ದಕ್ಷಿಣ ರೈಲ್ವೆ ಇಲಾಖೆಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಲೊಕೋ ಪೈಲಟ್, ಟೆಕ್ನಿಶಿಯನ್ ಪೋಸ್ಟ್, ಜ್ಯೂನಿಯರ್ ಇಂಜಿನಿಯರ್, ಟ್ರೈನಿ ಮ್ಯಾನೇಜರ್ ಸೇರಿದಂತೆ ಒಟ್ಟು 790 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡಿನ ರಾಜ್ಯದಲ್ಲಿ ಈ ಹುದ್ದೆ ನೇಮಕಾತಿ ನಡೆಯಲಿದೆ.
ವಿದ್ಯಾರ್ಹತೆ: ಅಸಿಸ್ಟೆಂಟ್ ಲೋಕೋ ಪೈಲಟ್ ಮತ್ತು ಟೆಕ್ನಿಶಿಯನ್ ಹುದ್ದೆಗೆ ಎಸ್ಎಸ್ಎಲ್ಸಿ ಮತ್ತು ಐಟಿಐ ಪದವಿ, ಜ್ಯೂನಿಯರ್ ಇಂಜಿನಿಯರ್ ಹುದ್ದೆಗೆ ಡಿಪ್ಲೊಮಾ ಪದವಿ, ಟೆಕ್ನಿಶಿಯನ್ ಹುದ್ದೆಗೆ ಪದವಿಯನ್ನು ಹೊಂದಿರಬೇಕು.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ ವಯೋಮಿತಿ 42 ವರ್ಷ ಆಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಹುದ್ದೆ ವಿವರ: ಅಸಿಸ್ಟೆಂಟ್ ಲೋಕೋ ಪೈಲಟ್ 234, ಟೆಕ್ನಿಶಿಯನ್ನಲ್ಲಿ , ಟ್ರೈನಿ ಮ್ಯಾನೇಜರ್ನಲ್ಲಿ 27, ಜ್ಯೂನಿಯರ್ ಇಂಜಿನಿಯರ್- 168, ಟೆಕ್ನಿಷಿಯನ್- 361 ಹುದ್ದೆಗಳು ಸೇರಿದಂತೆ ಒಟ್ಟು 709 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು www.rrcmas.in ಈ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬೇಕು
ಅಭ್ಯರ್ಥಿಗಳು ಮೇಲಿನ ಲಿಂಕ್ನಲ್ಲಿ ಆನ್ಲೈನ್ ಅಪ್ಲಿಕೇಷನ್ನಲ್ಲಿ ವೈಯಕ್ತಿಕ ಮಾಹಿತಿ ಮತ್ತು ಬಯೋಡೇಟಾವನ್ನು ಎಚ್ಚರಿಕೆಯಿಂದ ಭರಿಸಬೇಕು. ಜೊತೆಗೆ ಅಭ್ಯರ್ಥಿಗಳು ಜನ್ಮ ದಿನದ ದಾಖಲಾತಿ ಸೇರಿದಂತೆ ಶೈಕ್ಷಣಿಕ ಅರ್ಹತೆ ಮತ್ತು ಸೇವಾ ಅನುಭವವನ್ನು ಭರಿಸಬೇಕು. ಮೂರು ತಿಂಗಳಿಗಿಂತ ಹಳೆಯದಲ್ಲದ ಪಾಸ್ಪೋರ್ಟ್ ಫೋಟೋ, ಸಹಿ ಮತ್ತು ಸ್ವಯಂ ದೃಢೀಕೃತ ಶೈಕ್ಷಣಿಕ ದಾಖಲಾಗಿ, ಜಾತಿ ಪ್ರಮಾಣ ಪತ್ರಗಳನ್ಜು ಭರ್ತಿ ಮಾಡಬೇಕು. ಆಯ್ಕೆ: ಈ ಹುದ್ದೆಗೆ ಅಭ್ಯರ್ಥಿಗಳು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಬಹು ಆಯ್ಕೆ ಮಾದರಿ ಪರೀಕ್ಷೆ, ದಾಖಲಾತಿ ಪರಿಶೀಲನೆ ಜೊತೆಗೆ ವೈದ್ಯಕೀಯ ಪರೀಕ್ಷೆ ನಡೆಸಿ ಅಂತಿಮವಾಗಿ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ ಜುಲೈ 30ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 30 ಆಗಿದೆ.
ವಿಶೇಷ ಸೂಚನೆ: ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ವೇಳೆ ಎದುರಾಗುವ ಪ್ರಶ್ನೆ ಅಥವಾ ಇನ್ನಿತರ ಮಾಹಿತಿ ಕುರಿತು [email protected]. ಈ ಇ ಮೇಲ್ ವಿಳಾಸಕ್ಕೆ ತಿಳಿಸಬಹುದು ಅಥವಾ 044-28213185 ಈ ನಂಬರ್ಗೆ ಆರ್ಆರ್ಸಿಯ ಕೆಲಸದ ದಿನದಲ್ಲಿ ಬೆಳಗ್ಗೆ 10ರಿಂದ ಸಂಜೆ 5ಗಂಟೆ ಒಳಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗೆ ಅಭ್ಯರ್ಥಿಗಳು ಅಧಿಕೃತ ಜಾಲತಾಣವಾದ rrcmas.in ಇಲ್ಲಿಗೆ ಭೇಟಿ ನೀಡಬಹುದು.