ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳು ಮತ್ತು ವಿಭಜಿಸಿ ಆಳುವ ರಾಜಕಾರಣದ ವಿರುದ್ಧ ರಾಹುಲ್ ಗಾಂಧಿ ಸಂಸತ್ತಿನಲ್ಲಿ ನಿರಂತರವಾಗಿ ಧ್ವನಿ ಎತ್ತುತ್ತಿದ್ದರು. ಈ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರವು ಅವರನ್ನು ರಾಜಕೀಯವಾಗಿ ಗುರಿಯಾಗಿಸಲು ಮತ್ತು ಸಂಸತ್ತಿನಲ್ಲಿ ಅವರ ಉಪಸ್ಥಿತಿಯನ್ನು ತಡೆಯಲು ಮತ್ತು 2024ರಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸದಂತೆ ತಡೆಯಲು ಸಂಚು ರೂಪಿಸಿದೆ.
ಮೋದಿ ಉಪನಾಮ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯವು ವಿಧಿಸಿರುವ ಶಿಕ್ಷೆಗೆ ಶುಕ್ರವಾರ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ನರೇಂದ್ರ ಮೋದಿ ನೇತೃತ್ವದ ಬಿಜೆಪಿಯ ದ್ವೇಷದ ವಿರುದ್ಧ ಪ್ರೀತಿಯ ಗೆಲುವಾಗಿದ್ದು ಕೊನೆಗೂ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಹರ್ಷ ವ್ಯಕ್ತಪಡಿಸಿದ್ದಾರೆ.
ಭಾರತ್ ಜೋಡೋ ಯಾತ್ರೆಯ ಯಶಸ್ಸಿನ ನಂತರ ಜನರ ಧ್ವನಿಯಾಗಿರುವ ರಾಹುಲ್ ಗಾಂಧಿಯವರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆದಿತ್ತು.
ಯಾವುದೇ ಶಕ್ತಿಯು ಜನರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಇದನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಪಕ್ಷ ಇನ್ನಾದರೂ ಅರ್ಥ ಮಾಡಿಕೊಳ್ಳಬೇಕು. ಸುಪ್ರೀಂ ಕೋರ್ಟಿನ ತೀರ್ಪಿನಿಂದ ಪ್ರಜಾಪ್ರಭುತ್ವಕ್ಕೆ ಗೆಲುವಾಗಿದ್ದು, ಸಂವಿಧಾನವನ್ನು ಎತ್ತಿಹಿಡಿದಂತಾಗಿದೆ.
ಈ ಪ್ರಕರಣದಲ್ಲಿ ಬಿಜೆಪಿಯ ಪಿತೂರಿ ಸಂಪೂರ್ಣವಾಗಿ ಬಯಲಾಗಿದ್ದು ಅವರಿಗೆ ಇನ್ನಾದರೂ ವಿರೋಧ ಪಕ್ಷಗಳ ನಾಯಕರನ್ನು ದುರುದ್ದೇಶಪೂರ್ವಕವಾಗಿ ಗುರಿಯಾಗಿಸುವುದನ್ನು ನಿಲ್ಲಿಸುವ ಸಮಯ ಬಂದಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ
ಈ ಕಾರಣಕ್ಕಾಗಿ ಸೂರತ್ ನ್ಯಾಯಾಲಯದ ಶಿಕ್ಷೆ ಪ್ರಕಟವಾದ 24 ಗಂಟೆಯ ಒಳಗೆ ಕೇಂದ್ರ ಸರಕಾರದ ಆದೇಶದ ಮೇರೆಗೆ ರಾಹುಲ್ ಅವರ ಸಂಸದೀಯ ಸದಸ್ಯತ್ವವನ್ನು ಅಮಾನತುಗೊಳಿಸಲಾಗಿತ್ತು. ಆದರೆ ಈಗ ಸುಪ್ರೀಂ ಕೋರ್ಟ್ ಅವರಿಗೆ ಪರಿಹಾರವನ್ನು ನೀಡಿದೆ ಮತ್ತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇವೆ.