‘ಲಾಲ್ ಬಾಗ್ ಪ್ಲವರ್ ಶೋ’ಗೆ ‘ ಮುಖ್ಯಮಂತ್ರಿ ಸಿದ್ಧರಾಮಯ್ಯ’ ಅವರಿಂದ ಚಾಲನೆ

ಬೆಂಗಳೂರು: ಬೆಂಗಳೂರಿನಲ್ಲಿ ಪ್ರಸಿದ್ಧ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ, ಚಾಲನೆ ನೀಡಿದ್ದಾರೆನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆಗೂ ಮುನ್ನಾ ದಿನ ಆರಂಭಗೊಂಡು ಸುಮಾರು ಒಂದು ವಾರಗಳ ಕಾಲ ನಡೆಯಲಿರುವಂತ ಲಾಲ್ ಬಾಗ್ ಫಲಪುಷ್ಪ ಪ್ರದರ್ಶಕ್ಕೆ, ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದರು.
.
ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ, ಎಂ.ಎಲ್ಸಿಗಳಾದ ಗೋವಿಂದರಾಜು, ಟಿಎ ಶರವಣ ಉಪಸ್ಥಿತರಾಗಿದ್ದರು.
ಇದೇ ಸಂದರ್ಭದಲ್ಲಿ ಕೆಂಗಲ್ ಹನುಮಂತಯ್ಯ ಜೀವನಾಧಾರಿತ ಪುಸ್ತಕವನ್ನು ಕೂಡ ಬಿಡುಗಡೆ ಮಾಡಲಾಯಿತು. ಈ ಮೂಲಕ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಗೂ ಮುನ್ನಾ ನಡೆಯುವಂತೆ ಬೆಂಗಳೂರಿನ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ದೊರೆತಂತೆ ಆಗಿದೆ.
ಪ್ರತಿ ವರ್ಷ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಬಾರಿ 2.50 ಕೋಟಿ ವೆಚ್ಚದಲ್ಲಿ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ವಿವಿಧ ಮಾದರಿಗಳು, ಬಗೆ ಬಗೆಯ ಫಲಫುಷ್ಪಗಳು ಲಾಲ್ ಬಾಗ್ ನಲ್ಲಿ ನೋಡುಗರನ್ನು ಆಕರ್ಷಿಸುವಂತಿವೆ.