ಬೆಂಗಳೂರು: ಇಲ್ಲಿನ ಪ್ಯಾರಾ ಮೆಡಿಕಲ್ ಕಾಲೇಜಿನ ವಾಶ್ ರೂಂನಲ್ಲಿ ನಡೆದ ವಿಡಿಯೋ ಚಿತ್ರೀಕರಣದ ನಿಷ್ಪಕ್ಷಪಾತ ತನಿಖೆಗಾಗಿ ಪ್ರಕರಣವನ್ನು ವಿಶೇಷ ತನಿಖಾ ತಂಡದ ಸುಪರ್ದಿಗೆ ನೀಡುವಂತೆ ಕರಾವಳಿಯ ಶಾಸಕರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಶುಕ್ರವಾರದಂದು ಬೆಂಗಳೂರಿನಲ್ಲಿ
ಭೇಟಿಯಾಗಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಜಿಲ್ಲೆಯ ಶಾಸಕರುಗಳಾದ ಯಶ್ ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ದ.ಕ ಜಿಲ್ಲೆಯ ಶಾಸಕರುಗಳಾದ ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಭಾಗೀರತಿ ಮುಂತಾದವರು ಉಪಸ್ಥಿತರಿದ್ದರು.