ಮಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ನಡೆಸಿದ 2023ರ ವಾರ್ಷಿಕ ಪರೀಕ್ಷೆಯಲ್ಲಿ ಬಯೋಟೆಕ್ನಾಲಜಿ ವಿಭಾಗದಲ್ಲಿ 5ನೇ ಮತ್ತು 6ನೇ ರ್ಯಾಂಕ್ ಗಳಿಸಿದ ಫೀನಾ ಹಕೀಮ್ ಮತ್ತು ಹರ್ಷಿತ ಶೆಟ್ಟಿಗಾರ್ ಅಭಿನಂದನಾ ಕಾರ್ಯಕ್ರಮವನ್ನು ಪಿ.ಎ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ರಮೀಝ್ ಎಂ.ಕೆ ಮಾತನಾಡಿ, ವಿದ್ಯಾರ್ಥಿಗಳು ಉದ್ಯೋಗಾವಕಾಶವನ್ನು ಸದುಪಯೋಗಪಡಿಸಿಕೊಳ್ಳುವ ಬಗ್ಗೆ ಹಾಗೂ ರ್ಯಾಂಕ್ ಗಳಿಸಿ ಕಾಲೇಜಿಗೆ ಕೀರ್ತಿ ತರುವ ಬಗ್ಗೆ ತಿಳಿ ಹೇಳಿದರು.
ಪಿ. ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಸರ್ಫಾಝ್ ಹಾಸಿಮ್ ಜೆ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ಯಜ್ನೀಶ್ ಮಾತನಾಡಿ ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಕುಮಾರಿ ಫೀನಾ ಹಕೀಮ್ ಮತ್ತು ಕುಮಾರಿ ಹರ್ಷಿತ ಶೆಟ್ಟಿಗಾರ್ ಇವರನ್ನು ಸನ್ಮಾನಿಸಲಾಯಿತು ಹಾಗೂ ಕಾಲೇಜಿನ ಪೇಸ್ ನ್ಯೂಸ್ ಬುಲೇಟಿನ್ 2023 ಸಂಚಿಕೆ-3 ಅನ್ನು ಬಿಡುಗಡೆಗೊಳಿಸಲಾಯಿತು.
ಪಿ.ಎ. ವಿದ್ಯಾಸಂಸ್ಥೆಯ ಎ.ಜಿ.ಯಂ. ಸರ್ಫುದ್ದೀನ್, ಎಂ.ಬಿ.ಎ ವಿಭಾಗದ ನಿರ್ದೇಶಕ ಹಾಗೂ ಡೀನ್ (ವಿದ್ಯಾರ್ಥಿ ಕಲ್ಯಾಣ ಅಧಿಕಾರಿ) ಡಾ. ಸಯ್ಯದ್ ಅಮೀನ್, ಪಿ.ಎ. ಟ್ರಸ್ಟ್ ನ ವಿವಿಧ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಡಾ. ಸರ್ಫಾಝ್ ಹಾಸಿಮ್ ಜೆ, ಫ್ರೋ. ಸೂಫಿ, ಡಾ. ಸಲೀಮುಲ್ಲಾ ಖಾನ್, ಡಾ. ಸಜೀಸ್ ರಘುನಾಥನ್ ಮತ್ತು ವಿವಿಧ ವಿಭಾಗದ ಮುಖ್ಯಸ್ಥರು, ಕಾಲೇಜಿನ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಉಪಪ್ರಾಂಶುಪಾಲೆ ಡಾ. ಶರ್ಮಿಳಾ ಕುಮಾರಿ ಅತಿಥಿಗಳನ್ನು ಸ್ವಾಗತಿಸಿದರು. ಬಯೋಟೆಕ್ನಾಲಜಿ ವಿಭಾಗದ ಮುಖ್ಯಸ್ಥ ಡಾ. ಕೃಷ್ಣ ಪ್ರಸಾದ್ ವಂದಿಸಿದರು. ಕುಮಾರಿ ಬುಶೈರಾ ನಿರೂಪಿಸಿದರು.
ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಇಸ್ಮಾಯಿಲ್ ಶಾಫಿ, ಬಯೋಟೆಕ್ನಾಲಜಿ ವಿಭಾಗದ ಡಾ. ರೊನಾಲ್ಡ್ ವಾಲ್ಡರ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಇಕ್ಬಾಲ್ ಕಾರ್ಯಕ್ರಮವನ್ನು ಆಯೋಜಿಸಿದರು.