ಕೋಟೇಶ್ವರ: ಇಲ್ಲಿನ ಗೀತಾ ಶ್ರೀಧರ್ ದಂಪತಿಗಳ ಮಗನಾದ 26 ದಿನದ ಮಗು ಆರ್ಯನ್ ಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆದಿದ್ದು, ಕರ್ನಾಟಕ ರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲಾ ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರುಗಳೆಲ್ಲರೂ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ತೆರಳಿ, ತೀವ್ರ ನಿಗಾ ಘಟಕದಲ್ಲಿ ಶಸ್ತ್ರ ಚಿಕಿತ್ಸೆಗೊಳಗಾಗಿರುವ ಮಗು ಶೀಘ್ರ ಗುಣಮುಖವಾಗಲು ದೇವರಲ್ಲಿ ಪ್ರಾರ್ಥಿಸಿ, ಹೆತ್ತವರನ್ನು ಸಂತೈಸಿ, ಚಂದಾ ಎತ್ತಿ ಸಂಗ್ರಹಿಸಿದ ಹಣ ಒಟ್ಟು 90959 ರೂ. ಗಳನ್ನು ಮಗುವಿನ ತಾಯಿಗೆ ಹಸ್ತಾಂತರ ಮಾಡಿದರು.
ಈ ಸಂಧರ್ಭದಲ್ಲಿ ಹಣ ಚಂದಾ ಎತ್ತಲು ಶ್ರಮಿಸಿದ ಸಮಾಜ ಸೇವಕ ರಾಘವೇಂದ್ರ ಕೊಡವೂರು, ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯಕ್, ಮಹಿಳಾ ಜಿಲ್ಲಾಧ್ಯಕ್ಷೆ ಗೀತಾ ಪಾಂಗಾಳ, ಜಿಲ್ಲಾ ಉಪಾಧ್ಯಕ್ಷ ಕುಶಲ್ ಅಮೀನ್, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಜಯ ಪೂಜಾರಿ, ಜಿಲ್ಲಾ ಸಲಹೆಗಾರ ಲಕ್ಷ್ಮೀಶ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಅವಿನಾಶ್ ಶೆಟ್ಟಿ, ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ರೋಷನ್ ಬಂಗೇರ, ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಕೃಷ್ಣ ಪಾಂಗಾಳ, ಜಿಲ್ಲಾ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಸಂತೋಷ ಕುಲಾಲ್, ಜಿಲ್ಲಾ ಮಹಿಳಾ ಸಂಘಟನಾ ಕಾರ್ಯದರ್ಶಿ ಜ್ಯೋತಿ, ಜಿಲ್ಲಾ ಮಹಿಳಾ ಸಹ-ಸಂಘಟನಾ ಕಾರ್ಯದರ್ಶಿ ಲಕ್ಷ್ಮೀ, ಉಡುಪಿ ತಾಲೂಕು ಅಧ್ಯಕ್ಷ ಪ್ರಭಾಕರ್ ರಾಜ್ ಪೂಜಾರಿ, ಜಿಲ್ಲಾ ಸದಸ್ಯ ಪ್ರಮೋದ್ ಕುಲಾಲ್, ಸರಿತಾ, ಕವಿತಾ ಮೊದಲಾದವರು ಉಪಸ್ಥಿತರಿದ್ದರು.