ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನೆಯಡಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಕೃತಕಾಂಗ ಜೋಡಣೆ (ಪಿ ಎಂಡ್ ಓ) ಅಭಿಯಂತರರ -1 ಹುದ್ದೆಗೆ, ಪಿ ಆಂಡ್ ಓ ಎಂಜಿನಿಯರಿಂಗ್ ಪದವಿ / ಡಿಪ್ಲೋಮಾ ವಿದ್ಯಾರ್ಹತೆ ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ 2 ವರ್ಷ ಅನುಭವ ಹೊಂದಿರುವವರು ಹಾಗೂ ಇಯರ್ ಮೋಲ್ಡ್ ಟೆಕ್ನೀಷಿಯನ್ (ಕಿವಿ ಅಚ್ಚು ತಂತ್ರಜ್ಞ) ಹುದ್ದೆಗೆ ಇಯರ್ ಮೋಲ್ಡ್ ಟೆಕ್ನೀಷಿಯನ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆಗಸ್ಟ್ 25 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ, ಭಾರತೀಯ ರೆಡ್‌ಕ್ರಾಸ್
ಸಂಸ್ಥೆ, ರೆಡ್‌ಕ್ರಾಸ್ ಭವನ, ಅಜ್ಜರಕಾಡು, ಉಡುಪಿ ದೂ. ಸಂಖ್ಯೆ: 0820-2533372 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ
ವಿಕಲಚೇತನರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.