ಕಟಪಾಡಿ: ಬೈಕ್-ಕಾರು ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ

ಕಟಪಾಡಿ: ಕಾರೊಂದು ಡಿವೈಡರ್ ದಾಟಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ.

ಗಾಯಾಳುಗಳ ಮಾಹಿತಿ ತಿಳಿದು ಬಂದಿಲ್ಲ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಸಮಾಜ ಸೇವಕ ಆಸ್ಟಿನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಾಪು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.