ಮೈಸೂರು: ನಂಜನಗೂಡಿನಲ್ಲಿರುವ ಕಂಪನಿ ತಯಾರಿಸಿದ್ದ ಬಿಯರ್ನಲ್ಲಿ ಸೆಡಿಮೆಂಟ್ ಅಂಶ ಕಂಡುಬಂದಿದೆ. ಕಂಪನಿಯ ಸ್ಟ್ರಾಂಗ್ ಹಾಗೂ ಅಲ್ಟ್ರಾ ಲ್ಯಾಗರ್ ಈ ಅಂಶ ಗೋಚರಿಸಿದ್ದು, 7e ಮತ್ತು 7c ನಮೂನೆಯ (ದಿನಾಂಕ 15-07-23ರಂದು) ಬಾಟಲಿಂಗ್ನಲ್ಲಿರುವುದು ತಿಳಿದುಬಂದಿದೆ.
ಮದ್ಯಪ್ರಿಯರ ನೆಚ್ಚಿನ ಬಿಯರ್ ಬ್ರ್ಯಾಂಡ್ವೊಂದರಲ್ಲಿ ಅಪಾಯಕಾರಿ ರಾಸಾಯನಿಕ ಅಂಶ ಪತ್ತೆಯಾಗಿದೆ. ಹೀಗಾಗಿ, 25 ಕೋಟಿ ರೂಪಾಯಿ ಮೌಲ್ಯದ 78,678 ಬಾಕ್ಸ್ ಮದ್ಯವನ್ನು ವಶಪಡಿಸಿಕೊಂಡಿರುವ ಮೈಸೂರು ಅಬಕಾರಿ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪ್ರತಿಷ್ಠಿತ ಬ್ರ್ಯಾಂಡ್ವೊಂದರ ಬಿಯರ್ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿದ್ದು ಕಂಪನಿಯ ವಿರುದ್ಧ ಪೊಲೀಸ್ ಕೇಸ್ ದಾಖಲಾಗಿದೆ.
ಅಬಕಾರಿ ಇಲಾಖೆಯ ಉಪ ಆಯುಕ್ತ ಎ.ರವಿಶಂಕರ್ ಪ್ರತಿಕ್ರಿಯಿಸಿ, “ಕಂಪನಿಯವರು ಪ್ರತಿಕ್ರಿಯೆ ನೀಡಿದ್ದಾರೆ. ಇನ್ಹೌಸ್ ಕೆಮಿಸ್ಟ್ ಅವರು ಕೊಟ್ಟಿರುವ ವರದಿಯಲ್ಲಿ ಈ ಬಿಯರ್ ಅನ್ನು ಮನುಷ್ಯರು ಕುಡಿಯಲು ಯೋಗ್ಯವಲ್ಲ ಎಂದು ಬಂದಿರುವ ವರದಿ ಆದರಿಸಿ ಕ್ರಮ ತೆಗೆದುಕೊಳ್ಳಲಾಗಿದೆ” ಎಂದು ಹೇಳಿದರು.ಮಾಹಿತಿ ತಿಳಿದ ಕೂಡಲೇ ಬಿಯರ್ ಮಾದರಿಯನ್ನು ಕೆಮಿಕಲ್ ಲ್ಯಾಬ್ಗೆ ಕಳುಹಿಸಲಾಗಿತ್ತು. ಈ ಕುರಿತು (2-08-2023ರಂದು) ಕೆಮಿಕಲ್ ವರದಿ ಬಂದಿದ್ದು ‘ಅನ್ಫಿಟ್ ಫಾರ್ ಹ್ಯುಮನ್ ಕನ್ಸಂಪ್ಷನ್’ ಎಂದು ತಿಳಿಸಲಾಗಿದೆ. ಇದೇ ಅವಧಿಯಲ್ಲಿ ಒಟ್ಟು 78,678 ಬಾಕ್ಸ್ ಬಿಯರ್ ಬಾಕ್ಸ್ ಸರಬರಾಜಾಗಿತ್ತು. ಅಷ್ಟೊತ್ತಿಗೆ ಎಲ್ಲ ಬಾಕ್ಸ್ಗಳನ್ನೂ ತಡೆಹಿಡಿಯಲಾಗಿದೆ. ಕೆಲವು ಡಿಪೋದಿಂದ ಅಂಗಡಿಗಳಿಗೂ ವಿತರಣೆಯಾಗಿತ್ತು. ರಿಟೈಲ್ನಲ್ಲೂ ಮಾರಾಟವಾಗದಂತೆ ತಡೆಹಿಡಿಯಲಾಗಿದೆ. ಗುಣಮಟ್ಟದ ಬಿಯರ್ ತಯಾರಿಸದ ಕಂಪನಿಯ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.