ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2023-24ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಅಂತರಾಷ್ಟ್ರೀಯ/ರಾಷ್ಟ್ರೀಯ/ರಾಜ್ಯಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಶೇ.75ರಷ್ಟು ಸಹಾಯಧನ ರೂಪದಲ್ಲೂ ಶೇ.25ರಷ್ಟು ಸ್ವಯಂಭರಿಸುವ ಷರತ್ತಿನೊಡನೆ ರೂ.20.00ಲಕ್ಷಗಳ ಘಟಕ ವೆಚ್ಚದ ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ.
ಆದ್ದರಿಂದ ಪರಿಶಿಷ್ಟ ಜಾತಿ ಅರ್ಹ ಕ್ರೀಡಾಪಟುಗಳು ತಮ್ಮ ಪ್ರಸ್ತಾವನೆಗಳನ್ನು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವುದು.ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 31 ಕೊನೆಯ ದಿನಾಂಕವಾಗಿದ್ದು ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಡಾ|| ರೋಶನ್ ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಉಡುಪಿ ಜಿಲ್ಲೆ (0820-2521324, 9845432303) ಇವರನ್ನು ಸಂಪರ್ಕಿಸಲು ಕೋರಿದೆ.