ಉಡುಪಿ: ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯ ವೈಖರಿ, ಜನಪರ ಕಾಳಜಿಯನ್ನು ಮೆಚ್ಚಿ ಪೆರ್ಡೂರು ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಉಪಾಧ್ಯಕ್ಷೆ ಚೇತನಾ ಶೆಟ್ಟಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡಸುಂದರ್ ಶೆಟ್ಟಿ ಆ 17ರಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ಭಾರತೀಯ ಜನತಾ ಪಕ್ಷದ ಬಾವುಟವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಗೀತಾಂಜಲಿ ಸುವರ್ಣ, ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ದೇವು ಪೂಜಾರಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.