ಉಡುಪಿ: ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ವ್ಯಾಪ್ತಿಯ ಎಲ್ಲಾ ಸ್ಥಿರಾಸ್ತಿಗಳ ಮಾರುಕಟ್ಟೆ ದರಗಳನ್ನು, ತಹಶೀಲ್ದಾರರ ಅಧ್ಯಕ್ಷತೆಯಲ್ಲಿ, ಉಡುಪಿ ತಾಲೂಕು ಮಾರುಕಟ್ಟೆ ಮೌಲ್ಯಮಾಪನ ಉಪ ಸಮಿತಿ ಸಭೆಯಲ್ಲಿ ಪರಿಷ್ಕರಿಸಿ, ಇದರ ಕರಡು ಪ್ರತಿಯನ್ನು ಸಾರ್ವಜನಿಕರ ಮಾಹಿತಿಗಾಗಿ ನಗರದ ಹಿರಿಯ ಉಪನೋಂದಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿರುತ್ತದೆ.
ಈ ಕುರಿತು ಸಾರ್ವಜನಿಕರು ಸಲಹೆ, ಸೂಚನೆ ಹಾಗೂ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ ಪ್ರಕಟಣೆಯ ದಿನಾಂಕದಿಂದ ಹದಿನೈದು ದಿನಗಳ ಒಳಗಾಗಿ ಉಡುಪಿ ಹಿರಿಯ ಉಪ ನೋಂದಣಿ ಕಚೇರಿಗೆ ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.