ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪಡುಕುತ್ಯಾರು: ಧರ್ಮದಂಡ ಸಮರ್ಪಣೆ

ಶ್ರೀಗಳ 19ನೇ ವರುಷದ ಚಾತುರ್ಮಾಸ್ಯ ವ್ರತಾಚರಣೆ ಸವಿ ನೆನಪಿಗಾಗಿ ಅವರ ಶಿಷ್ಯಂದಿರಾದ ಮಂಚಕಲ್ಲು ದಿ|ಚಂದ್ರಾವತಿ ವಾಸುದೇವ ಆಚಾರ್ಯ ಅವರ ಪುತ್ರರಾದ ಉಡುಪಿ ತಿರುಮಲ ಪಿ.ವಿ. ಗಂಗಾಧರ ಆಚಾರ್ಯ ಉಡುಪಿ, ಶ್ರೀಧರ ವಿ. ಆಚಾರ್ಯ ಮುಂಬಯಿ, ಪಿ.ವಿ. ಅಚ್ಯುತ ಆಚಾರ್ಯ ಉಡುಪಿ ಮತ್ತು ಕುಟುಂಬಸ್ಥರು ಧರ್ಮ ದಂಡವನ್ನು ಕೊಡುಗೆ ರೂಪದಲ್ಲಿ ಸಮರ್ಪಿಸಿದ್ದು ಪೃಥ್ವಿರಾಜ್ ಆಚಾರ್ಯ ಕಿನ್ನಿಗೋಳಿ ಇದನ್ನು ತಯಾರಿಸಿದ್ದಾರೆ.

ಮಹಾಸಂಸ್ಥಾನದ ಆಸ್ಥಾನ ವಿದ್ವಾಂಸ ವೇ| ಬ್ರ|ಶಂಕರಾಚಾರ್ಯ ಗುರುನಾಥಾಚಾರ್ಯ ಕಡ್ಲಾಸ್ಕರ್ ಪಂಡಿತ್ ಹುಬ್ಬಳ್ಳಿ ಅವರ ಮಾರ್ಗದರ್ಶನದಲ್ಲಿ ತಂತ್ರಿವರ್ಯರಾದ ಬ್ರಹ್ಮಶ್ರೀ ಅಕ್ಷಯ ಶರ್ಮಾ ಕಟಪಾಡಿ ಅವರ ನೇತೃತ್ವದಲ್ಲಿ ಮಹಾಸಂಸ್ಥಾನದ ಶ್ರೀ ನಾಗಧರ್ಮೇಂದ್ರ ಸರಸ್ವತೀ ಸಂಸ್ಕೃತ ವೇದ ಸಂಜೀವಿನೀ ಪಾಠಶಾಲೆಯ ಪೂರ್ವ ಮತ್ತು ಪ್ರಸ್ತುತ ವಿದ್ಯಾರ್ಥಿಗಳ ಸಹಕಾರದೊಂದಿಗೆ ವೈದಿಕ ಕಾರ್ಯಕ್ರಮಗಳು ಜರಗಿದವು.

ಚಾತುರ್ಮಾಸ ವ್ರತ ನಿರ್ವಹಣಾ ಸಮಿತಿ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ಅಧ್ಯಕ್ಷತೆ ವಹಿಸಿದ್ದರು. ಸಾಮಾಜಿಕ ಮತ್ತು ಧಾರ್ಮಿಕ ಮುಖಂಡ ಆಚಾರ್ಯ ಮುಂಬಯಿ ಶುಭಾಂಶನೆಗೈದರು. ಪ್ರತಿಷ್ಠಾನದ ಕೋಶಾಧಿಕಾರಿ ಅರವಿಂದ ವೈ. ಆಚಾರ್ಯ ಬೆಳುವಾಯಿ, ಅಸೆಟ್ ಅಧ್ಯಕ್ಷ ಬಿ. ಸೂರ್ಯಕುಮಾರ ಹಳೆಯಂಗಡಿ, ಮಾತೃ ಮಂಡಳಿ ಅಧ್ಯಕ್ಷೆ ಸಂಧ್ಯಾ ಲಕ್ಷ್ಮಣ ಆಚಾರ್ಯ ಉಡುಪಿ, ಪ್ರಮುಖರಾದ ತ್ರಾಸಿ ಸುಧಾಕರ ಆಚಾರ್ಯ, ರೂಪೇಶ್ ಆಚಾರ್ಯ ಶಿರ್ವ, ಗುರುರಾಜ್ ಕೆ. ಜೆ. ಮಂಗಳೂರು, ಬಂಬ್ರಾಣ ಯಜ್ಞೇಶ ಆಚಾರ್ಯ ಮಂಗಳೂರು, ಕೆ. ಪ್ರಭಾಕರ ಆಚಾರ್ಯ ಕೋಟೆ ಕಾರು, ದಿನೇಶ್ ಆಚಾರ್ಯ ಪಡುಬಿದ್ರಿ, ಕೆ. ನಾಗರಾಜ ಆಚಾರ್ಯ ಉಡುಪಿ, ಬಿ. ಸುಂದರ ಆಚಾರ್ಯ ಮಂಗಳೂರು, ಆನೆಗುಂದಿ ಗುರು ಸೇವಾ ಪರಿಷತ್ ಅಧ್ಯಕ್ಷ ಕೆಮ್ಮಣ್ಣು ಗಣೇಶ ಆಚಾರ್ಯ, ವೈ. ಧರ್ಮೇಂದ್ರ ಆಚಾರ್ಯ ಕಾಸರಗೋಡು, ಹರ್ಷ ಆಚಾರ್ಯ ಮಂಚಕಲ್, ಅಚ್ಯುತ ಆಚಾರ್ಯ ಉಡುಪಿ, ಮೋಹನ ಆಚಾರ್ಯ ಉಡುಪಿ, ರಾಘವೇಂದ್ರ ಆಚಾರ್ಯ ಉಡುಪಿ, ರತ್ನಾಕರ ಆಚಾರ್ಯ ಉದ್ಯಾವರ, ಜನಾರ್ದನ ಆಚಾರ್ಯ ಕನ್ಯಾನ, ವಾದಿರಾಜ ಆಚಾರ್ಯ ಮಂಗಳೂರು, ಉಮೇಶ ಆಚಾರ್ಯ ಮುಂಬೈ, ಯೋಲಾಕ್ಷ ಶರ್ಮ ಪಡುಕುತ್ಯಾರು ಉಪಸ್ಥಿತರಿದ್ದರು.

ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಕಾರ್ಯದರ್ಶಿ ಲೋಕೇಶ್ ಆಚಾರ್ ಕಂಬಾರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.