ಬರ್ಮಿಂಗ್ಹ್ಯಾಮ್: ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡ ಅಂತಾರಾಷ್ಟ್ರೀಯ ಅಂಧರ ಕ್ರೀಡಾ ಫೆಡರೇಶನ್ (ಐಬಿಎಸ್ಎ) ವಿಶ್ವ ಕ್ರೀಡಾಕೂಟದಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ.ಅಂತಾರಾಷ್ಟ್ರೀಯ ಅಂಧರ ಕ್ರೀಡಾ ಫೆಡರೇಶನ್ ವಿಶ್ವ ಕ್ರೀಡಾಕೂಟದಲ್ಲಿ ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡ ಆಸ್ಟ್ರೇಲಿಯಾವನ್ನು ಮಣಿಸಿ ಚಿನ್ನ ಗೆದ್ದಿದೆ.
ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕಾಂಗರೂ ಪಡೆ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 114ರನ್ ಕಲೆ ಹಾಕಿತು.
ಮತ್ತೊಂದೆಡೆ ಭಾರತದ ಪುರುಷರ ಅಂಧರ ಕ್ರಿಕೆಟ್ ತಂಡವು ಐಬಿಎಸ್ಎ ವಿಶ್ವ ಕ್ರೀಡಾಕೂಟದಲ್ಲಿ ಫೈನಲ್ ತಲುಪಿದೆ. ಅಂತಿಮ ಪಂದ್ಯದಲ್ಲಿ ಭಾರತ ಪಾಕಿಸ್ತಾನದೊಂದಿಗೆ ಸೆಣಸಲಿದೆ. ಪುರುಷರ ತಂಡವು ಚಿನ್ನದ ಮೇಲೆ ಕಣ್ಣಿಟ್ಟಿದೆ. ಇದಕ್ಕೂ ಮುನ್ನ ನಡೆದ ಐಬಿಎಸ್ಎ ವಿಶ್ವ ಕ್ರೀಡಾಕೂಟದಲ್ಲಿ ಪಾಕಿಸ್ತಾನವು ಭಾರತ ತಂಡವನ್ನ ಮಣಿಸಿತ್ತು.
ಎರಡನೇ ಇನ್ನಿಂಗ್ಸ್ ವೇಳೆ ಮಳೆ ಬಂದ ಕಾರಣ ಪಂದ್ಯವನ್ನ 9 ಓವರ್ಗಳಿಗೆ ಇಳಿಸಿ ಭಾರತಕ್ಕೆ 43 ರನ್ಗಳ ಗುರಿ ನೀಡಲಾಯಿತು. ಈ ಗುರಿಯನ್ನ ಬೆನ್ನತ್ತಿದ ಭಾರತ ತಂಡದ ನಾರಿಯರು ಕೇವಲ 3.3 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 43 ರನ್ ಕಲೆ ಹಾಕಿ ಗೆಲುವಿನ ನಗೆ ಬೀರಿದರು. ಈ ಮೂಲಕ ಮೊದಲ ಬಾರಿಗೆ ಐಬಿಎಸ್ಎ ವಿಶ್ವ ಕ್ರೀಡಾಕೂಟದಲ್ಲಿ ಭಾರತದ ಮಹಿಳೆಯರು ಇತಿಹಾಸ ನಿರ್ಮಿಸಿದರು.
ಈ ಮೂಲಕ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿ ಸೋಲಿಗೆ ಸೇಡು ತೀರಿಸಿಕೊಳ್ಳಲು ಭಾರತ ಸಜ್ಜಾಗಿದೆ.ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆಸೀಸ್ ಟೀಂಅನ್ನು 9 ವಿಕೆಟ್ಗಳಿಂದ ಸೋಲಿಸಿ ಭಾರತದ ನಾರಿಯರು ಇತಿಹಾಸ ನಿರ್ಮಿಸಿದ್ದಾರೆ. ಐಬಿಎಸ್ಎ ವಿಶ್ವ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಭಾರತ ವಿಜಯ ಪತಾಕೆಯನ್ನು ಹಾರಿಸಿದೆ.