ಕಾಪು: ಕೇಂದ್ರದಲ್ಲಿ ಅಸ್ಥಿತ್ವದಲ್ಲಿರುವ ಭಾರತೀಯ ಜನತಾ ಪಾರ್ಟಿಯ ಅಭಿವೃದ್ದಿ ಪರ ಕಾಳಜಿಯಿಂದ ಹಾಗೂ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ನ ಬ್ಲಾಕ್ ದಕ್ಷಿಣ ವಲಯ ಉಪಾಧ್ಯಕ್ಷ ಹಾಗೂ ಕಟಪಾಡಿ ಗ್ರಾ.ಪಂ ಮಾಜಿ ಅಧ್ಯಕ್ಷ , ಹಾಲಿ ಸದಸ್ಯ ಅಶೋಕ್ ರಾವ್ ಮತ್ತು ಕಟಪಾಡಿ ಗ್ರಾ.ಪಂ. ಕಾಂಗ್ರೆಸ್ ಬೆಂಬಲಿತ ಸದಸ್ಯ ಕಾಪು ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು.