ಉಡುಪಿ: ಬೆಳ್ತಂಗಡಿಯ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ತೀವ್ರ ಸ್ವರೂಪದ ಪ್ರತಿಭಟನೆಯಲ್ಲಿ ಬದಲಾಗಿದ್ದು, ಉಡುಪಿಯಲ್ಲಿ ಮಂಗಳವಾರದಂದು ಬೃಹತ್ ಪ್ರತಿಭಟನೆ ನಡೆಯಿತು.
ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಸೌಜನ್ಯ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಗೂ ಮೊದಲು ಕೃಷ್ಣಮಠದಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ಮೆರವಣಿಗೆಯಲ್ಲಿ ಘೋಷಣೆಗಳನ್ನು ಕೂಗುತ್ತಾ ಸಾಗಲಾಯಿತು. ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ತಾಯಿ ಕುಸುಮಾವತಿ ಹಾಗೂ ತಮ್ಮಣ್ಣ ಶೆಟ್ಟಿ ಭಾಗವಹಿಸಿ ಸೌಜನ್ಯ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆದು ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೆ.೩ ರಂದು ಬೆಳ್ತಂಗಡಿ ಚಲೋ ಹೋರಾಟ ಹಮ್ಮಿಕೊಳ್ಳಲಾಗಿದ್ದು, ೩ ತಿಂಗಳಲ್ಲಿ ಸರಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ವಿಧಾನಸೌಧ ಚಲೋ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಮಹೇಶ್ ಶೆಟ್ಟಿ ತಿಮರೋಡಿ ಎಚ್ಚರಿಸಿದರು.
ಈ ಸಂದರ್ಭ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯಕರ್ತೆಯರು ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿ ಗೊಂದಲದ ವಾತಾವರಣ ಸೃಷ್ಟಿಸಿದರು. ನಂತರ ಪೊಲೀಸರು ಅವರನ್ನು ಚದುರಿಸಿ ಬೇರೆಡೆಗೆ ಸ್ಥಳಾಂತರಿಸಿದರು.