ಉಡುಪಿ: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆಯು ಎಂಜಿಎಂ ಕಾಲೇಜು ಎದುರುಗಡೆ ಇರುವ ಶ್ರೀ ಗಣೇಶ್ ಬಿಲ್ಡಿಂಗ್ ನ ನೆಲಮಹಡಿಯಲ್ಲಿ ಸೆ.8 ರಂದು ಸಂಜೆ 4 ಗಂಟೆಗೆ ಉದ್ಘಾಟನೆಯಾಗಲಿದ್ದು, ವಿಧಾನಸಭೆಯ ಸಭಾಪತಿ ಯು.ಟಿ ಖಾದರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಕಲ್ಯಾಣಪುರ ಮಿಲಾಗ್ರೀಸ್ ಕೆಥೆಡ್ರಲ್ ಚರ್ಚಿನ ಧರ್ಮಗುರು ಫಾ. ವಲೇರಿಯನ್ ಮೆಂಡೋನ್ಸಾ ಆಶೀರ್ವಚನ ನೀಡಲಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಕಚೇರಿಯನ್ನು, ಅಮ್ಮುಂಜೆ ಸೈಂಟ್ ಅಂಟೋನಿ ಆರ್ಥೊಡಾಕ್ಸ್ ಸಿರಿಯನ್ ಚರ್ಚಿನ ಫಾ. ಲಾರೆನ್ಸ್ ಡೇವಿಡ್ ಭದ್ರತಾ ಕೊಠಡಿಯನ್ನು ಉದ್ಘಾಟಿಸಲಿದ್ದಾರೆ.
ಕರ್ನಾಟಕ ಸ್ಟೇಟ್ ಸೌಹಾರ್ದ ಫೆಡರಲ್ ಕೋ-ಆಪರೇಟಿವ್ ಬೆಂಗಳೂರು ಇದರ ನಿರ್ದೇಶಕ ಮಂಜುನಾಥ್ ಎಸ್.ಕೆ, ರಾಜ್ಯ ಸಹಕಾರಿ ಯೂನಿಯನ್ ನಿರ್ದೇಶಕ ಜಯಕರ್ ಶೆಟ್ಟಿ ಇಂದ್ರಾಳಿ, ಲಯನ್ಸ್ ಜಿಲ್ಲಾ 371ಸಿ ಗವರ್ನರ್ ನೇರಿ ಕರ್ನೇಲಿಯೋ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ ಎಂದು ಸಂಸ್ಥೆಯ ಸಂಸ್ಥಾಪಕ ಜೀವನ್ ಡಿಸೋಜಾ ತಿಳಿಸಿದ್ದಾರೆ.