ಮಧ್ಯರಾತ್ರಿ ಹೊತ್ತು ಕೃಷ್ಣಮಠಕ್ಕೆ ಭೇಟಿ ನೀಡಿ ಕೃಷ್ಣ ಕೃಪೆಗೆ ಪಾತ್ರರಾದ ಯು.ಟಿ.ಖಾದರ್

ಉಡುಪಿ: ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಅವರು ಜನ್ಮಾಷ್ಟಮಿಯ ಸಂದರ್ಭದಲ್ಲಿ ಮಧ್ಯರಾತ್ರಿಯ ಹೊತ್ತು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಜಗದ್ಗುರುವಿನ ಕೃಪೆಗೆ ಪಾತ್ರರಾಗಿದ್ದಾರೆ.

ಬುಧವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ಕಾರ್ಯಕ್ರಮ ಮುಗಿಸಿ ಮಂಗಳೂರಿನಲ್ಲಿ ವಿವಿಧೆಡೆ ಕೃಷ್ಣಾಷ್ಟಮಿ, ಮೊಸರು ಕುಡಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಡುಪಿಯ ಕಡಿಯಾಳಿಯಲ್ಲಿ ಪ್ರಸಾದ್ ಕಾಂಚನ್ ನೇತೃತ್ವದಲ್ಲಿ ಶಶಿರಾಜ್ ಕುಂದರ್ ಮತ್ತು ತಂಡದಿಂದ ಟೈಗರ್ ಫ್ರೆಂಡ್ಸ್ ನ ಹುಲಿವೇಷ ಪ್ರದರ್ಶನ ಸ್ಪರ್ಧೆಯಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಅವರು ಹಿತೈಷಿಗಳ ಕೋರಿಕೆ ಮೇರೆಗೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ.

ಬಹುತೇಕ ಶ್ರೀಕೃಷ್ಣ ಪರಮಾತ್ಮ ಜನ್ಮ ತಾಳಿದ ಘಳಿಗೆಯಲ್ಲೇ ಕಾಕತಾಳೀಯ ಘಟನೆ ಎಂಬಂತೆ ಯು.ಟಿ.ಖಾದರ್ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಠದ ಸತ್ಯನಾರಾಯಣ ಭಟ್ ಸ್ಪೀಕರ್ ಅವರನ್ನು ಬರಮಾಡಿಕೊಂಡಿದ್ದಾರೆ. ಮಠದ ಕೊಳದಲ್ಲಿ ಕೈ ಕಾಲು ತೊಳೆದು ಮಠದೊಳಗೆ ಭೇಟಿ ನೀಡಿದ ಯು.ಟಿ.ಖಾದರ್ ಅವರನ್ನು ಸತ್ಯನಾರಾಯಣ ಭಟ್ ಮತ್ತು ಸಮಿತಿ ಸದಸ್ಯರು ಶಾಲು ಹೊದಿಸಿ ಸ್ವಾಗತಿಸಿ ಪ್ರಸಾದ ನೀಡಿ ಹರಸಿದರು.