ಕುಂದಾಪುರ : ಉಡುಪಿ ಜಿಲ್ಲಾ ಅಮೆಚೂರ್ ಅಸೋಸಿಯೇಶನ್ ಅವರು 18 ವರ್ಷದೊಳಗಿನವರಿಗಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸಿನನ್ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.












