ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಸೆ.11 ರಂದು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸಿಎ ಕೋರ್ಸ್ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸಿಎ ವಸಂತ ಶಾನುಭಾಗ್ ಸಿಎ ಪರೀಕ್ಷೆ ತೆಗೆದುಕೊಳ್ಳಲು ಬೇಕಾದ ಶೈಕ್ಷಣಿಕ ಅರ್ಹತೆ ಮತ್ತು ಉತ್ತೀರ್ಣರಾಗಲು ಅನುಸರಿಸಬೇಕಾದ ಕ್ರಮಗಳು ಹಾಗೂ ಸಿಎ ಕೋರ್ಸ್ ನ ವಿಶೇಷತೆಗಳ ಕುರಿತು ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲೆ ರಾಗಿಣಿಯವರು ಅಧ್ಯಕ್ಷತೆ ವಹಿಸಿದ್ದರು.
ವಿದ್ಯಾರ್ಥಿಗಳಾದ ಸಂಜನಾ ಸ್ವಾಗತಿಸಿದರು, ವಿನಯ್ ಶಾನುಭಾಗ್ ವಂದಿಸಿ, ಸಾನಿಕ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ರಝಿನಾ ಬಾನು ನಿರೂಪಿಸಿದರು.