ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ ಚೇತನಾ ಮೊಬೈಲ್ ಆ್ಯಪ್, ಪೇ-ಡೈರೆಕ್ಟ್ ಎಟಿಎಂ ಕಾರ್ಡ್, ಪಿಗ್ಮಿ ಕಲೆಕ್ಷನ್ ಮೊಬೈಲ್ ಆ್ಯಪ್ ಅನ್ನು ಭಾನುವಾರ ಅಜ್ಜರಕಾಡು ಪುರಭವನದಲ್ಲಿ ಅನಾವರಣಗೊಳಿಸಲಾಯಿತು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚೇತನಾ ಮೊಬೈಲ್ ಆ್ಯಪ್, ಮಾಜಿ ಶಾಸಕ ರಘುಪತಿ ಭಟ್ ಪೇ-ಡೈರೆಕ್ಟ್ ಎಟಿಎಂ ಕಾರ್ಡ್ ಹಾಗೂ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಪಿಗ್ಮಿ ಕಲೆಕ್ಷನ್ ಆ್ಯಪ್ ಅನ್ನು ಅನಾವರಣಗೊಳಿಸಿದರು.
ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ, ಐಸಿಐಸಿಐ ಬ್ಯಾಂಕ್ ನ ಡೆಪ್ಯುಟಿ ಜನರಲ್ ಮ್ಯಾನೇಜರ್ ಅಭಿತಾಬ್ ದೀಕ್ಷಿತ್, ಸೊಸೈಟಿಯ ಶತಮಾನೋತ್ಸವ ಸಮಿತಿ ಸಂಚಾಲಕ ಪುರುಷೋತ್ತಮ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕ್ರೆಡಾ ಅಧ್ಯಕ್ಷ ಮನೋಹರ್ ಶೆಟ್ಟಿ, ಜೀವ ರಕ್ಷಕ ಈಶ್ವರ್ ಮಲ್ಪೆ, ಯೋಗ ಪಟು ತನುಶ್ರೀ ಪಿತ್ರೋಡಿ ಅವರನ್ನು ಸನ್ಮಾನಿಸಲಾಯಿತು.
ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 2022-23ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸಲಾಗಿದೆ.
ಸಂಘದ ಅಧ್ಯಕ್ಷ ಸಂಜೀವ ಕಾಂಚನ್ ವಾರ್ಷಿಕ ವರದಿ ಮತ್ತು ಪರಿಶೋಧಿತ ಲೆಕ್ಕಪತ್ರಗಳನ್ನು ಮಂಡಿಸಿದರು. ವರದಿ ಸಾಲಿನ ಅಂತ್ಯಕ್ಕೆ ಸಂಘವು ಒಟ್ಟು ಒಟ್ಟು 20,147 ಸದಸ್ಯರಿಂದ 4.75 ಕೋಟಿ ಪಾಲು ಬಂಡವಾಳ ಹಾಗೂ 451.43ಕೋಟಿ ಠೇವಣಿ ಹೊಂದಿದೆ. ಕೋಟಿ ಪಾಲು ಬಂಡವಾಳ ಹಾಗೂ 451.43ಕೋಟಿ ಠೇವಣಿ ಹೊಂದಿದೆ. 338.01ಕೋಟಿ ಹೊರಬಾಕಿ ಸಾಲ ಹೊಂದಿದ್ದು, ಸಂಘವು 2022-23ನೇ ಸಾಲಿನಲ್ಲಿ ಸುಮಾರು 2330 ಕೋಟಿ ವಾರ್ಷಿಕ ವಹಿವಾಟು ನಡೆಸಿದೆ.
ಸಂಘದ ಆಡಳಿತ ಮಂಡಳಿ ಸದಸ್ಯರಾದ ಹಾಜಿ ಸಯ್ಯದ್ ಅಬ್ದುಲ್ ರಜಾಕ್, ವಸಂತ ಕೆ.ಕಾಮತ್, ವಿನಯ ಕುಮಾರ್ ಟಿ.ಎ., ಜಯಾನಂದ ಸಿ.ಮೈಂದನ್, ಪದ್ಮನಾಭ ಕೆ.ನಾಯಕ್, ರಘುರಾಮ ಎಸ್.ಶೆಟ್ಟಿ, ಜಾರ್ಜ್ ಸ್ಯಾಮುವೆಲ್, ಸದಾಶಿವ ನಾಯ್ಕ್, ಜಯ ಶೆಟ್ಟಿ, ಗಾಯತ್ರಿ ಎಸ್. ಭಟ್ ಉಪಸ್ಥಿತರಿದ್ದರು.
ಸೊಸೈಟಿ ಅಧ್ಯಕ್ಷ ಸಂಜೀವ ಕಾಂಚನ್ ಸ್ವಾಗತಿಸಿದರು. ಪ್ರಭಾರ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಶೇರಿಗಾರ್ ವಂದಿಸಿದರು. ಶಾಖಾ ವ್ಯವಸ್ಥಾಪಕ ನವೀನ್ ಕೆ. ಕಾರ್ಯಕ್ರಮ ನಿರೂಪಿಸಿದರು.