ಏಷ್ಯಾ ಕಪ್ 2023ರ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾವನ್ನು ಬಗ್ಗು ಬಡಿದಿರುವ ಟೀಮ್ ಇಂಡಿಯಾ ಎಂಟನೇ ಬಾರಿಗೆ ಏಷ್ಯಾ ಕಪ್ ಚಾಂಪಿಯನ್ ಆಗಿ ಹೊರಹೊಮ್ಮಿತು. ಗೆಲ್ಲಲು ಕೇವಲ 51 ರನ್ಗಳ ಗುರಿ ಪಡೆದಿದ್ದ ರೋಹಿತ್ ಪಡೆ, ಯಾವುದೇ ವಿಕೆಟ್ ನಷ್ಟವಿಲ್ಲದೆ 6.1 ಓವರ್ಗಳಲ್ಲಿ ಗುರಿ ತಲುಪಿತು. ಆ ಮೂಲಕ 10 ವಿಕೆಟ್ಗಳ ಭರ್ಜರಿ ಜಯ ಗಳಿಸಿತು. ಮೊಹಮ್ಮದ್ ಸಿರಾಜ್, ಒಂದೇ ಓವರ್ನಲ್ಲಿ ನಾಲ್ಕು ವಿಕೆಟ್ ಕಿತ್ತು ಐತಿಹಾಸಿಕ ಸಾಧನೆ ಮಾಡಿದ್ದಲ್ಲದೇ, ಒಟ್ಟು 21 ರನ್ ನೀಡಿ 6 ವಿಕೆಟ್ ಗಳಿಸಿದ್ದರು.
ಹಾರ್ದಿಕ್ ಪಾಂಡ್ಯ ಶ್ರೀಲಂಕಾ ಬ್ಯಾಟರ್ಗಳ ಕೆಳ ಹಂತವು ಹೆಚ್ಚು ಹಿಗ್ಗದಂತೆ ನೋಡಿಕೊಂಡರು ಮತ್ತು ಇಡೀ ತಂಡವು 50 ರನ್ಗಳಿಗೆ ಪೆವಿಲಿಯನ್ಗೆ ಮರಳಿತು.












