ಕಾಪು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಭಾನುವಾರದಂದು ಕಾಪು ಬಿಜೆಪಿ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್ ನೆರವೇರಿಸಿದರು.
ಬಳಿಕ ಮಾತನಾಡಿದ ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್, ಮೋದಿ ಅವರ ಜನ್ಮ ದಿನದಿಂದ ಗಾಂಧಿ ಜಯಂತಿ ತನಕ ನಡೆಯುವ ಸೇವಾ ಪಾಕ್ಷಿಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಈ ಎಲ್ಲ ಸೇವಾ ಕಾರ್ಯಗಳ ಪುಣ್ಯದ ಫಲ ವಿಶ್ವನಾಯಕ ಮೋದಿಯವರಿಗೆ ದೊರಕಲಿ ತನ್ಮೂಲಕ ಮತ್ತೆ ಅವರ ನೇತೃತ್ವದಲ್ಲಿ ಗೆದ್ದು ಭಾರತ ಪರಮವೈಭವದತ್ತ ಸಾಗಲಿ ಎಂದು ಶುಭಹಾರೈಸಿದರು.
ಶಾಸಕಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಪ್ರಧಾನಿಯವರ ಕಾರ್ಯ ಚಟುವಟಿಕೆಗಳನ್ನು ಕೊಂಡಾಡಿ ಇಂದು ಇಡೀ ವಿಶ್ವಕ್ಕೆ ವಿಶ್ವಶಾಂತಿಗೆ ಅನಿವಾರ್ಯ ನಾಯಕ ಎಂದರು.
ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಶುಭಹಾರೈಸಿದರು.
ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಸರಕಾರಿ ಆಸ್ಪತ್ರೆಯ ರಕ್ತನಿಧಿಯ ವೈದ್ಯೆ ಡಾ.ವೀಣಾ, ಕಾರ್ಯಕ್ರಮದ ಸಂಚಾಲಕ ನವೀನ್ ಎಸ್ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ 53 ಬಾರಿ ರಕ್ತದಾನ ಮಾಡಿದ ರಾಘವೇಂದ್ರ ಪ್ರಭು ಕರ್ವಾಲು, ವಿಕಲಚೇತನರ ಪ್ಯಾರಾ ಒಲಂಪಿಕ್ಸ್ ನಲ್ಲಿ ಸೈಕ್ಲಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾಮ ಪಡೆದ ಯಶೋಧ ರಾಮಚಂದ್ರನ್ ಇವರಿಗೆ ಗೌರವಾರ್ಪಣೆ ನಡೆಯಿತು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಮಹಿಳಾ ಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣಹಿಂದುಳಿದ ವರ್ಗ ಮೋರ್ಚದ ಜಿಲ್ಲಾಧ್ಯಕ್ಷ ಸುರೇಂದ್ರ ಪಣಿಯೂರು, ರೈತ ಮೋರ್ಚ ಜಿಲ್ಲಾಧ್ಯಕ್ಷ ಪ್ರವೀಣ್ ಗುರ್ಮೆ, ಮಂಡಲ ಮಹಿಳಾ ಮೋರ್ಚ ಅಧ್ಯಕ್ಷೆ ಸುಮಾ ಶೆಟ್ಟಿ, ಪ್ರಮುಖರಾದ ಲತಾ ಆಚಾರ್ಯ, ಅನಿಲ್ ಕುಮಾರ್, ಹೈದರ್, ಸುರೇಖ ಶೈಲೇಶ್, ಶೈಲೇಶ್, ರಾಜ್ ಪಡುಬಿದ್ರೆ, ಶಶಿಧರ್ ವಾಗ್ಳೆ, ಕೇಸರಿ ಯುವರಾಜ್, ಶಶಿಪ್ರಭಾ ಶೆಟ್ಟಿ, ಅನಿಲ್ ಶೆಟ್ಟಿ ಮಲ್ಲಾರು ವಿವಿಧ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಕಾರ್ಯಕ್ರಮ ನಿರೂಪಿಸಿದರು.