ಉದ್ಯಮಿಗೆ 5 ಟಿಕೆಟ್ ಕೋಟಿ ವಂಚನೆ ಪ್ರಕರಣ: ಒಡಿಶಾದಲ್ಲಿ ಹಾಲಶ್ರೀ ಸ್ವಾಮೀಜಿಯ ಬಂಧನ

ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬೈಂದೂರು ಕ್ಷೇತ್ರದಲ್ಲಿ ಬಿಜೆಪಿಯಿಂದ ಎಂಎಲ್‌ಎ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಿದ ಚೈತ್ರ ಕುಂದಾಪುರ, ಕೋಟ್ಯಂತರ ರೂ. ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಒಡಿಶಾ ರಾಜ್ಯದಲ್ಲಿ ಬಂಧಿಸಿದ್ದಾರೆ.

ಪ್ರಕರಣದ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಒಡಿಶಾದ ಕಟಕ್‌ನಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಚಲಿಸುತ್ತಿದ್ದ ರೈಲಿನಲ್ಲೇ ಹಾಲಶ್ರೀಯನ್ನು ಬಂಧಿಸಿರುವ ಪೊಲೀಸರು ಅಲ್ಲಿಂದ ಬೆಂಗಳೂರಿಗೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ.