ಬೆಂಗಳೂರು ಬಂದ್ ಹಿನ್ನೆಲೆ ನಾಳೆ ನಗರದ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು:ನಾಳೆ ಸೆ.26 ರಂದು ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಬೆಂಗಳೂರು ಬಂದ್​​ಗೆ ಕರೆ ನೀಡಿವೆ. ನಾಳಿನ ಬಂದ್ ಗೆ ಹೋಟೆಲ್ ಮಾಲೀಕರ ಸಂಘಟನೆಗಳು, ಖಾಸಗಿ ವಾಹನ ಚಾಲಕರ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳು ಬಂದ್ ಗೆ ಬೆಂಬಲ ವ್ಯಕ್ತಪಡಿಸಿವೆಹಾಗಾಗಿ ಮಕ್ಕಳ ಸುರಕ್ಷತೆ, ರಕ್ಷಣೆ ದೃಷ್ಟಿಯಿಂದ ಬೆಂಗಳೂರು ನಗರದ ಎಲ್ಲಾ ಶಾಲೆಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದಯಾನಂದ್ ಆದೇಶ ಹೊರಡಿಸಿದ್ದಾರೆ​.ಖಾಸಗಿ ಶಾಲೆಗಳ ಒಕ್ಕೂಟದಿಂದ ನಾಳೆ ರಜೆ ನೀಡಲಾಗಿದೆ.

ಕಾವೇರಿ ನೀರಿಗಾಗಿ ರೈತ ಸಂಘಟನೆಗಳು ಹಾಗೂ ಕನ್ನಡ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ನಾಳೆ ಬೆಂಗಳೂರು ಬಂದಿದೆ ಬೆಂಬಲ ಸೂಚಿಸಿವೆ ಇದೆ ವೇಳೆ ಓಲಾ ಉಬರ್ ಕೂಡ ಬೆಂಬಲ ಸೂಚಿಸಿತ್ತು.ಬೆಂಗಳೂರು ಬಂದ್ ಗೆ ಉಬರ್ ಬೆಂಬಲ ಇಲ್ಲ . ಆದರೆ ಇದೀಗ ಬೆಂಗಳೂರಿನಲ್ಲಿ ಓಲಾ ಉಬರ್ ಸಂಘಟನೆ ಅಧ್ಯಕ್ಷ ತನ್ವೀರ್ ಪಾಷಾ ಈ ಕುರಿತಂತೆ ಮಾಹಿತಿ ನೀಡಿದ್ದಾರೆ.

ನಿನ್ನೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಂಘಟನೆಗಳ ಸಭೆ ನಡೆದಿದ್ದಾಗ ಇವರು ಸಹ ಭಾಗಿಯಾಗಿ ಪೂಲ ಉಬರ್ ಸಂಘಟನೆ ಹಾಗೂ ಚಾಲಕರು ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸುತ್ತೇವೆ ಎಂದು ಹೇಳಿದರು ಇದೀಗ ಓಲಾ ಉಬರ್ ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಅಧ್ಯಕ್ಷ ತನ್ವೀರ್ ಪಾಷ ತಿಳಿಸಿದ್ದಾರೆ.ನಾಳೆ ಬೆಂಗಳೂರಲ್ಲಿ ಓಲಾ ಉಬರ್ ಸೇವೆಗಳು ಯಥಾ ಸ್ಥಿತಿಯಲ್ಲಿ ಕಾರ್ಯನಿರ್ವಹಿಸಲಿವೆ ಎಂದು ಅವರು ಮಾಹಿತಿ ನೀಡಿದರು,