ಭಾರತ vs ಪಾಕಿಸ್ತಾನ ಹೈ-ವೋಲ್ಟೇಜ್ ಪಂದ್ಯಕ್ಕೆ ಅಂಪೈರ್‌ಗಳು ಪ್ರಕಟ : ವಿಶ್ವಕಪ್ 2023

ಅಕ್ಟೋಬರ್ 5ರಂದು ಅಹಮದಾಬಾದ್‌ನಲ್ಲಿ ಕಳೆದ ವಿಶ್ವಕಪ್‌ನ ಚಾಂಪಿಯನ್ ಇಂಗ್ಲೆಂಡ್ ಮತ್ತು ರನ್ನರ್-ಅಪ್ ನ್ಯೂಜಿಲೆಂಡ್ ತಂಡಗಳ ನಡುವೆ ರೋಚಕ ಉದ್ಘಾಟನಾ ಪಂದ್ಯ ನಡೆಯಲಿದೆ. ಈಗಾಗಲೇ ವಿಶ್ವದ ದೊಡ್ಡ ಕ್ರಿಕೆಟ್ ಪಂದ್ಯಾವಳಿಗೆ ಹಲವು ದೇಶಗಳು ತಮ್ಮ ತಂಡಗಳನ್ನು ಪ್ರಕಟಿಸಿವೆ ಮತ್ತು ಈ ಟೂರ್ನಿಗಾಗಿ ವಿಶ್ವದಾದ್ಯಂತ ಕ್ರಿಕೆಟ್ ಅಭಿಮಾನಿಗಳು ಕಾತರರಾಗಿದ್ದಾರೆ.ಭಾರತದಲ್ಲಿ ನಡೆಯುವ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ನಡೆಯಲಿದೆ.

ಸಾಂಪ್ರದಾಯಿಕ ಎದುರಾಳಿಗಳ ಬಹು ನಿರೀಕ್ಷಿತ ಪಂದ್ಯಕ್ಕೆ ಮುಂಚಿತವಾಗಿ, ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪಂದ್ಯದ ಅಂಪೈರ್‌ಗಳನ್ನು (ಅಧಿಕಾರಿ) ಪ್ರಕಟಿಸಿದೆ. ಇನ್ನು 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಯ ಬಹು ನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್ ಪಂದ್ಯವು ಅಕ್ಟೋಬರ್ 14ರ ಶನಿವಾರದಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಏಷ್ಯಾದ ಎರಡು ದೈತ್ಯ ತಂಡಗಳು ಪರಸ್ಪರ ಹಣಾಹಣಿಗೆ ಕಾತರದಿಂದ ಕಾಯುತ್ತಿರುವ ಕಾರಣ ಹೈ-ವೋಲ್ಟೇಜ್ ಪಂದ್ಯಕ್ಕಾಗಿ ಅಭಿಮಾನಿಗಳಲ್ಲಿ ಉತ್ಸಾಹವು ಹಿಮ್ಮಡಿಯಾಗುತ್ತಿದೆ.

2023ರ ಏಕದಿನ ವಿಶ್ವಕಪ್‌ಗೆ ಭಾರತ ತಂಡ- ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

2023ರ ಏಕದಿನ ವಿಶ್ವಕಪ್‌ಗೆ ಪಾಕಿಸ್ತಾನ ತಂಡ – ಬಾಬರ್ ಅಜಂ (ನಾಯಕ), ಶಾದಾಬ್ ಖಾನ್ (ಉಪನಾಯಕ), ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಇಫ್ತಿಕರ್ ಅಹ್ಮದ್, ಅಘಾ ಸಲ್ಮಾನ್, ಸೌದ್ ಶಕೀಲ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಹಸನ್ ಅಲಿ, ಉಸಾಮಾ ಮಿರ್, ಮೊಹಮ್ಮದ್ ವಾಸಿಂ ಜೂನಿಯರ್. ಪ್ರಯಾಣ ಮೀಸಲು ಆಟಗಾರರು: ಅಬ್ರಾರ್ ಅಹ್ಮದ್, ಜಮಾನ್ ಖಾನ್, ಮೊಹಮ್ಮದ್ ಹ್ಯಾರಿಸ್

ವರದಿಗಳ ಪ್ರಕಾರ, ರಿಚರ್ಡ್ ಇಲ್ಲಿಂಗ್‌ವರ್ತ್ ಮತ್ತು ಮರೈಸ್ ಎರಾಸ್ಮಸ್ ಅವರು ದೊಡ್ಡ ಪಂದ್ಯದ ಸಮಯದಲ್ಲಿ ಆನ್-ಫೀಲ್ಡ್ ಅಂಪೈರ್‌ಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ಇಂಗ್ಲೆಂಡ್‌ನ ಅಂತಾರಾಷ್ಟ್ರೀಯ ಅಂಪೈರ್ ರಿಚರ್ಡ್ ಕೆಟಲ್‌ಬರೋ ಅವರು ಮೂರನೇ ಅಂಪೈರ್ ಪಾತ್ರವನ್ನು ವಹಿಸಿಕೊಳ್ಳಲಿದ್ದಾರೆ. ಇದೇ ವೇಳೆ, ಆಂಡಿ ಪೈಕ್ರಾಫ್ಟ್ ಮ್ಯಾಚ್ ರೆಫ್ರಿಯಾಗಿರುತ್ತಾರೆ.