ಅಂತರ್ ಕಾಲೇಜು ಭಕ್ತಿ ಗೀತೆ ಸ್ಪರ್ಧೆ: ಶ್ರೀ ವೆಂ.ಪ. ಪೂ.ಕಾಲೇಜಿನ ವಿದ್ಯಾರ್ಥಿನಿ ಧಾರಿಣಿಗೆ ಪ್ರಥಮ ಸ್ಥಾನ

ಕುಂದಾಪುರ: ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಬಸ್ರೂರಿನಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ನಡೆದ ಕುಂದಾಪುರ ತಾಲೂಕು ಮಟ್ಟದ ಅಂತರ್ ಕಾಲೇಜು ಭಕ್ತಿಗೀತೆ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಧಾರಿಣಿ ಕೆ. ಎಸ್. ಪ್ರಥಮ ಸ್ಥಾನ ಪಡೆದಿರುತ್ತಾಳೆ.

ವಿದ್ಯಾರ್ಥಿನಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.