ಕುಂದಾಪುರ: ಪಕ್ಷ ವಿರೋಧಿ ಚಟುವಟಿಕೆ; 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಅನಗಳ್ಳಿ ಗ್ರಾಮ ಪಂಚಾಯತ್‌ನ ಅಧ್ಯಕ್ಷರು ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ನಿಲುವನ್ನು ವಿರೋಧಿಸಿ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಅನಗಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಭಾಕರ ಬಂಗೇರ ಮತ್ತು ಉದಯ ಪೂಜಾರಿಯವರನ್ನು ಕುಂದಾಪುರ ಮಂಡಲ ಅಧ್ಯಕ್ಷರ ಶಿಫಾರಸ್ಸಿನ ಮೇರೆಗೆ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್‌ ಸೂಚನೆಯಂತೆ 6 ವರ್ಷಗಳ ಕಾಲ ಬಿಜೆಪಿ ಪಕ್ಷದಿಂದ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್‌ಎಸ್. ಕಲ್ಮಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.