ಬ್ರಹ್ಮಾವರ: ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಗುರುತಿಸಿ ಸ್ವಾಗತಿಸುವ ಕಾರ್ಯಕ್ರಮವನ್ನು ವಿದ್ಯಾ ಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಮಾಜಿ ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ ಆಗಮಿಸಿದ್ದರು.
ವಿದ್ಯಾ ಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇದರ ಸಂಸ್ಥಾಪಕ ಸುಬ್ರಮಣ್ಯ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ವಿದ್ಯಾಲಕ್ಷ್ಮೀ ಸಂಸ್ಥೆಯ ಹಳೆ ವಿದ್ಯಾರ್ಥಿಗಳಾದ ಕುಮಾರಿ ರಮ್ಯಾ , ಕುಮಾರಿ ಸೌಜನ್ಯ ಮತ್ತು ಪ್ರಭಾಕರ ತಿಂಗಳಾಯ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಬಡನಿಡಿಯೂರು, ನಿರ್ದೇಶಿಕಿ ಮಮತಾ ,ಪ್ರಾಂಶುಪಾಲೆ ಡಾ. ಸೀಮಾ ಜಿ ಭಟ್, ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರುಎಲ್ಲಾ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.
ಉಪನ್ಯಾಸಕಿಯರಾದ ಮಧುಮಿತಾ ಸ್ವಾಗತಿಸಿ,ಅನುಪಮ ಪಿ ಭಟ್ ವಂದಿಸಿ, ಕುಮಾರಿ ಸ್ವಾತಿ ನಿರೂಪಿಸಿದರು.