ಉಡುಪಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ಉಡುಪಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ(ರಿ) ಮತ್ತು ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಶ್ರೀಕೃಷ್ಣಾಪುರ ಮಠ ಇದರ ಜಂಟಿ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಜನಜಾಗೃತಿ ಮತ್ತು ಸಮಾವೇಶವನ್ನು ಪರ್ಯಾಯ ಸ್ವಾಮೀಜಿಯವರ ಪರವಾಗಿ ಮಠದ ದಿವಾನರಾದ ವರದರಾಜ ಭಟ್ ಇವರು ಉದ್ಘಾಟಿಸಿದರು.
ಸಮಾರಂಭದಲ್ಲಿ ಉಡುಪಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಸತ್ಯಾನಂದ ನಾಯಕ್, ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜನಜಾಗೃತಿ ವೇದಿಕೆಯ ಡಾ.ಪಿ.ವಿ.ಭಂಡಾರಿ ಮೊದಲಾದವರು ಭಾಗವಹಿಸಿದ್ದರು.