ಟೆನ್ನಿ ಕೋಯಿಟ್, ಟೆನ್ನಿಸ್ ಪಂದ್ಯಾಟ: ಶ್ರೀ ವೆಂ.ಪ.ಪೂ.ಕಾಲೇಜು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ನ್ಯಾಶನಲ್ ಪದವಿ ಪೂರ್ವ ಕಾಲೇಜು ಬಾರಕೂರು ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಟೆನ್ನಿ ಕೋಯಿಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದು ವಿದ್ಯಾರ್ಥಿಗಳಾದ ಶಿಹಾಬ್ ಮತ್ತು ಮನೀಶ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಸಾತ್ವಿಕ್, ವಿನಯ್, ಕಲ್ಪಿತಾ, ಲಿಖಿತಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.