ಕಿನ್ನಿಮೂಲ್ಕಿ ಕನ್ನರ್ಪಾಡಿ ಬ್ರಾಹ್ಮಣ ಸಂಘದ ನೂತನ ಅಧ್ಯಕ್ಷರಾಗಿ ಎಂ ಎನ್ ರಾಜೇಂದ್ರ ಆಯ್ಕೆ

ಉಡುಪಿ: ಕಿನ್ನಿಮೂಲ್ಕಿ ಕನ್ನರ್ಪಾಡಿ ಬ್ರಾಹ್ಮಣ ಸಂಘದ ವಾರ್ಷಿಕ ಮಹಾ ಸಭೆಯು ಕೆ ನಾಗೇಶ್ ಭಟ್ ಅಧ್ಯಕ್ಷತೆಯಲ್ಲಿ ಶನಿವಾರ ಕಿನ್ನಿಮೂಲ್ಕಿಯ ಶ್ರೀದೇವೀ ಸಭಾಭವನದಲ್ಲಿ ಜರಗಿತು. ನೂತನ ಅಧ್ಯಕ್ಷರಾಗಿ ಎಂ ಎನ್ ರಾಜೇಂದ್ರ, ಕಾರ್ಯದರ್ಶಿಯಾಗಿ ಮಂಚಿ ಸುರೇಶ್ ರಾವ್, ಖಜಾಂಚಿಯಾಗಿ ಶ್ರೀಕಾಂತ ಭಟ್ ಮುಂದಿನ ಎರಡು ವರ್ಷಗಳ ಅವಧಿಗೆ ಆಯ್ಕೆಗೊಂಡರು, ವೆಂಕಣ್ಣ ಆಚಾರ್ಯ, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈದ ಭಾರತಿ ಭಟ್ ಇವರಿಗೆ ಗೌರವಾರ್ಪಣೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ವಿವಾಹದ 50 ನೇ ವರ್ಷ ಆಚರಿಸಿದ ಸಂಘದ ಹಿರಿಯ ದಂಪತಿಗಳನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಬಳಿಕ ಸಂಘದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.