ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಅ.15 ರಿಂದ 24 ರ ವರೆಗೆ ಮಹಾನವರಾತ್ರಿ ಉತ್ಸವ ಜರುಗಲಿದೆ.
ಅ.23 ರಂದು ಮಹಾ ನವಮಿ ದಿನ ಬೆಳಗ್ಗೆ 11.30ಕ್ಕೆ ಚಂಡಿಕಾ ಯಾಗ, ಮಧ್ಯಾಹ್ನ 12.20ಕ್ಕೆ ರಥೋತ್ಸವ ಜರುಗಲಿದೆ. ಅ.24 ರಂದು ವಿಜಯ ದಶಮಿಯಂದು ವಿದ್ಯಾರಂಭ, ನವಾನ್ನಪ್ರಾಶನ ನಡೆಯಲಿದೆ. ನವರಾತ್ರಿ ಉತ್ಸವದಲ್ಲಿ ಭಕ್ತರು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗಬೇಕು ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ತಿಳಿಸಿದ್ದಾರೆ.
ಮಹಾನವರಾತ್ರಿ ಉತ್ಸವದ ಸಂದರ್ಭ ಪ್ರತಿದಿನ ಶತರುದ್ರ ನಡೆಯಲಿದ್ದು, ಈ ಹೊತ್ತಲ್ಲಿ (ಬೆಳಗ್ಗೆ 9.15ರಿಂದ 10.45ರ ತನಕ) ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ, ಭಕ್ತಾದಿಗಳು ಸಹಕರಿಸಬೇಕು ಎಂದು ವ್ಯವಸ್ಥಾಪನಾ ಸಮಿತಿ ತಿಳಿಸಿದೆ.