ಉಡುಪಿ, ಜುಲೈ 11: ಕೌಶಲ್ಯಾಭಿವೃಧ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಕೌಶಲ್ಯ ದಿನದ ಅಂಗವಾಗಿ ಉದ್ಯೋಗಮೇಳ ಕಾರ್ಯಕ್ರಮವು ಜುಲೈ 15 ರಂದು ಬೆಳಗ್ಗೆ 10 ಗಂಟೆಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ನಡೆಯಲಿದೆ.
ಉದ್ಯೋಗಮೇಳದ ಅಂಗವಾಗಿ ವೃತ್ತಿ ಮಾರ್ಗದರ್ಶನ ತರಬೇತಿ ಮತ್ತು ಸಂದರ್ಶನ ಪೂರ್ವ ತಯಾರಿಯ ಬಗ್ಗೆ ಕಾರ್ಯಾಗಾರವು ಜುಲೈ 12 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ನಡೆಯಲಿದೆ.
ಜುಲೈ 15 ರಂದು ನಡೆಯುವ ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿ/ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಉದ್ಯೋಗಾಕಾಂಕ್ಷಿಗಳ ನೇಮಕ ಮಾಡಿಕೊಳ್ಳಲಿರುವುದರಿಂದ ಖಾಸಗಿ ವಲಯದಲ್ಲಿನ ಉದ್ಯೋಗಕ್ಕೆ ಆಸಕ್ತರಿರುವ ಎಸ್.ಎಸ್.ಎಲ್.ಸಿ/ಪಿ.ಯು.ಸಿ/ಯಾವುದೇ ಪದವಿ/ಡಿಪ್ಲೋಮಾ/ಐ.ಟಿ.ಐ/ಸ್ನಾತ್ತಕೋತ್ತರ ಹಾಗೂ ಕ್ಷೇತ್ರಕ್ಕೆ ಸಂಬಂಧಿಸಿದ ವಿದ್ಯಾರ್ಹತೆಯ ಅಭ್ಯರ್ಥಿಗಳು ವಿದ್ಯಾರ್ಹತೆ ಅಂಕಪಟ್ಟಿ/ರೆಸ್ಯೂಮ್(ಬಯೋಡೇಟಾ) ಇತ್ಯಾದಿ ದಾಖಲೆಗಳೊಂದಿಗೆ ಜುಲೈ 15 ರಂದು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ರಜತಾದ್ರಿ ಮಣಿಪಾಲ ಇಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಹಾಜರಾಗುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.