ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್: 2 ಎಲ್ಇಟಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಪಿಟಿಐ ವರದಿ ಮಾಡಿದೆ.

ಶೋಪಿಯಾನ್‌ನ ಅಲ್ಶಿಪೋರಾ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿದ್ದು ಉಗ್ರರನ್ನು ಮಟ್ಟಹಾಕುತ್ತಿವೆ. ಕಾರ್ಯಾಚರಣೆಯಲ್ಲಿ 2 ಉಗ್ರರು ಹತರಾಗಿದ್ದಾರೆ.

ಹತರಾದ ಭಯೋತ್ಪಾದಕರನ್ನು ಎಲ್ಇಟಿಯ ಮೋರಿಫತ್ ಮಕ್ಬೂಲ್ ಮತ್ತು ಜಾಜಿಮ್ ಫಾರೂಕ್ ಅಬ್ರಾರ್ ಎಂದು ಗುರುತಿಸಲಾಗಿದೆ. ಕಾಶ್ಮೀರಿ ಪಂಡಿತ್ ದಿವಂಗತ ಸಂಜಯ್ ಶರ್ಮಾ ಹತ್ಯೆಯಲ್ಲಿ ಭಯೋತ್ಪಾದಕ ಅಬ್ರಾರ್ ಭಾಗಿಯಾಗಿದ್ದಾನೆ ಎಂದು ಕಾಶ್ಮೀರ ಎಡಿಜಿಪಿ ಹೇಳಿದ್ದಾರೆ.

ಅಲ್ಶಿಪೋರಾ ಪ್ರದೇಶದಲ್ಲಿ ಉಗ್ರಗಾಮಿಗಳ ವಿರುದ್ಧ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಆರಂಭಿಸಿದಾಗ, ಆ ಪ್ರದೇಶದಲ್ಲಿ ಉಗ್ರಗಾಮಿಗಳ ಉಪಸ್ಥಿತಿಯನ್ನು ಸೂಚಿಸುವ ಗುಪ್ತಚರ ಮಾಹಿತಿಯ ಮೇರೆಗೆ ಈ ಎನ್ ಕೌಂಟರ್ ಪ್ರಾರಂಭವಾಯಿತು.