ಉಡುಪಿ: ಶ್ರೀ ಕೃಷ್ಣಮಠಕ್ಕೆ ಇಂದು ಖ್ಯಾತ ಸಿನಿಮಾ ಕಲಾವಿದೆ ಪ್ರೇಮಾ ಆಗಮಿಸಿ ದೇವರ ದರ್ಶನ ಪಡೆದರು. ಈ ಸಂದರ್ಭ ಮಠದ ದಿವಾನ ವರದರಾಜ ಭಟ್ ಹಾಗೂ ಮಧೂರು ನಾರಾಯಣ ಶರಳಾಯ ಉಪಸ್ಥಿತರಿದ್ದರು.
ಭಾರತ ಸರಕಾರದ ಫಾರ್ಮಸಿಕ್ಯೂಟಿಕಲ್ಸ್ ಎಕ್ಸ್ಪೋರ್ಟ್ ಪ್ರಮೋಷನ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷಡಾ.ಎಸ್.ವಿ.ವೀರಮಣಿ ಕುಟುಂಬ ಸಮೇತರಾಗಿ ಆಗಮಿಸಿ ದೇವರ ದರ್ಶನ ಪಡೆದುಕೊಂಡು ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಇವರಿಂದ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ,ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಮೊದಲಾದವರು ಉಪಸ್ಥಿತರಿದ್ದರು.


















