ಬೀದರ್ನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪೋಷಣ್ ಅಭಿಯಾನ ಯೋಜನೆ ಅಡಿ ಈ ಹುದ್ದೆಗಳ ನೇಮಕಾತಿ ನಡೆಸಲಾಗುವುದು.
ಒಟ್ಟು 3 ಹುದ್ದೆಗಳ ಭರ್ತಿ ನಡೆಸಲಾಗುವುದು. ಈ ಹುದ್ದೆಗಳು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು ಎಂದು ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಕೇಂದ್ರದ ಪೋಷಣ್ ಯೋಜನೆಗೆ ಗುತ್ತಿಗೆ ಆಧಾರದ ಮೇಲೆ ಈ ಹುದ್ದೆ ನೇಮಕಾತಿ ನಡೆಯಲಿದೆ.ಹುದ್ದೆ ವಿವರ ನೋಡುವುದಾದರೆ: ಬೀದರ್ನಲ್ಲಿ ಜಿಲ್ಲಾ ಪಟ್ಟದಲ್ಲಿ ಕಾರ್ಯಕ್ರಮ ಸಹಾಯಕರು 1
ಭಾಲ್ಕಿ ಶಿಶು ಅಭಿವೃದ್ಧಿ ಯೋಜನೆಯ ಅಡಿ ತಾಲೂಕು ಸಂಯೋಜಕರ ಹುದ್ದೆ -1
ಸಂತಪೂರ್ನಲ್ಲಿ ಶಿಶು ಅಭಿವೃದ್ಧಿ ಯೋಜನೆ ಅಡಿ ತಾಲೂಕು ಸಂಯೋಜಕರ ಹುದ್ದೆ 1
ವಿದ್ಯಾರ್ಹತೆ:
ಕಾರ್ಯಕ್ರಮ ಸಹಾಯಕರು: ಅಧಿಕೃತ ಮಂಡಳಿಯಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು
ಬ್ಲಾಕ್ ಪ್ರೊಜೆಕ್ಟ್ ಅಸಿಸ್ಟೆಂಟ್: ಅಧಿಕೃತ ಮಂಡಳಿಯಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು
ಅಭ್ಯರ್ಥಿಗಳು ಸಾಮಾಜಿಕ ಕಾರ್ಯಕ್ರಮದಲ್ಲಿ 3 ವರ್ಷ ಹುದ್ದೆ ಅನುಭವ ಹೊಂದಿರಬೇಕು.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 21 ವರ್ಷದಿಂದ ಗರಿಷ್ಠ 45 ವರ್ಷದೊಳಗಿನವರಾಗಿರಬೇಕು.
ಅಧಿಸೂಚನೆ
ಆಯ್ಕೆ ಪ್ರಕ್ರಿಯೆ: ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗೆ ಆಯ್ಕೆ ಮಾಡಲಾಗುವುದು.
ವೇತನ: ಜಿಲ್ಲಾ ಯೋಜನಾ ಸಹಾಯಕರಿಗೆ 18,000 ಮತ್ತು ಬ್ಲಾಕ್ ಪ್ರೊಜೆಕ್ಟ್ ಸಹಾಯಕರಿಗೆ 20000 ರೂ ಮಾಸಿಕ ವೇತನ ನಿಗದಿ ಪಡಿಸಲಾಗಿದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಭರ್ತಿ ಮಾಡಲಾಗುವುದು. ನಿಗದಿತ ಅರ್ಜಿ ಜೊತೆಯಲ್ಲಿ ಎಸ್ಎಸ್ಎಲ್ಸಿ ಅಂಕಪಟ್ಟಿ, ವಿದ್ಯಾರ್ಹತೆ ಅಂಕಪಟ್ಟಿ, ಅನುಭವ ಪ್ರಮಾಣ ಪತ್ರ, ಕಂಪ್ಯೂಟರ್ ತರಬೇತಿ ಪ್ರಮಾಣ ಪತ್ರ, ತಹಶೀಲ್ದಾರ್ರಿಂದ ವಾಸಸ್ಥಳ ಪ್ರಮಾಣಪತ್ರವನ್ನು ಈ ಕೆಳಗಿನ ವಿಳಾಸಕ್ಕೆ ನಿಗದಿತ ದಿನಾಂಕಕ್ಕೆ ಮುನ್ನವಾಗಿ ಖುದ್ದು ಅಥವಾ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ:
ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಲ್ಯಾಂಡ್ ಆರ್ಮಿ ಆಫೀಸ್ ಹಿಂದುಗಡೆ, ಮೈಲೂರು ರಸ್ತೆ, ಬೀದರ್.
ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು bidar.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.ಈ ಹುದ್ದೆಗೆ ಅಭ್ಯರ್ಥಿಗಳು ಅಕ್ಟೋಬರ್ 10ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್ 16 ಆಗಿದೆ.