ವಿದ್ಯಾಲಕ್ಷ್ಮೀ ಸಮೂಹ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ಕಾನೂನು ಅರಿವು ಕಾರ್ಯಕ್ರಮ

ಬ್ರಹ್ಮಾವರ: ಕಾನೂನು ಅರಿವಿನಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎನ್ನುವ ದೃಷ್ಟಿಕೋನದಿಂದ ವಿದ್ಯಾಲಕ್ಷ್ಮೀ ಸಮೂಹ ಸಂಸ್ಥೆ ಬ್ರಹ್ಮಾವರ ಇಲ್ಲಿನ ಆ್ಯಂಟಿ ರ್‍ಯಾಗಿಂಗ್ ಸಮಿತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಮತ್ತು ಜಿಲ್ಲಾ ವಕೀಲರ ಸಂಘ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್ ಭಾಗವಹಿಸಿ ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಜಾಗೃತಿ ಕುರಿತಾಗಿ ಮಾಹಿತಿ ನೀಡಿದರು.

ಉಡುಪಿ ಮಾನವ ಹಕ್ಕು ಪ್ರಾಧಿಕಾರದ ಅಧ್ಯಕ್ಷೆ ಪ್ರೀತಿ ವೈ ಮಾತನಾಡಿ, ಕಾನೂನು ಜೀವನದ ಅವಿಭಾಜ್ಯ ಅಂಗವಾಗಿದೆ. ಸಮಸ್ಯೆಗಳು ಬಂದಾಗ ಅದಕ್ಕೆ ಸೂಕ್ತವಾದ ಪರಿಹಾರವನ್ನು ಪಡೆದುಕೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ಚಂದ್ರ ಅಮೀನ್ ಕಾರ್ಯದರ್ಶಿ ಮಾನವ ಹಕ್ಕು ಪ್ರಾಧಿಕಾರ ಉಡುಪಿ, ಮಿತ್ರ ಕುಮಾರ್ ಶೆಟ್ಟಿ, ಉದಯ ನಾಯಕ್ ವಕೀಲರು ಮತ್ತು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಸುಬ್ರಹ್ಮಣ್ಯ, ನಿರ್ದೇಶಕಿ ಮಮತಾ , ಪ್ರಾಂಶುಪಾಲೆ ಡಾ. ಸೀಮಾ ಜಿ.ಭಟ್ ಹಾಗೂ ಸಂಸ್ಥೆಯ ಎಲ್ಲಾ ಉಪನ್ಯಾಸಕರು, ಉಪನ್ಯಾಸಕೇತರರು, ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.

ವಾಣಿಜ್ಯ ವಿಭಾಗದ ಉಪನ್ಯಾಸಕಿ ಕುಮಾರಿ ಸ್ವಾತಿ ನಿರೂಪಿಸಿದರು.