ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ನಾಪತ್ತೆ

ಪಡುಬಿದ್ರೆ: ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಶೃತಿನ್ ಶೆಟ್ಟಿ(35) ಎಂಬವರು ಅ.19 ರಿಂದ ನಾಪತ್ತೆಯಾಗಿರುವ ಪ್ರಕರಣ ನಡೆದಿದೆ.

ಕಾಪು ಜನಾರ್ಧನ ದೇವಸ್ಥಾನ ಬಳಿಯ ಅಂಗಡಿ ಮನೆ ನಿವಾಸಿಯಾಗಿರುವ ಶೃತಿನ್, ಅ.16ರಂದು ಕಾರ್ಕಳಕ್ಕೆ ಕರ್ತವ್ಯಕ್ಕೆ ತೆರಳಿದ್ದರು. ಬಳಿಕ ಅ. 19 ರಂದು ಪತ್ನಿಗೆ ಫೋನ್ ಕರೆ ಮಾಡಿ ತಾನು ನಂದಿಕೂರಿನಲ್ಲಿದ್ದು ಮನೆಗೆ ಬರುವುದಾಗಿ ತಿಳಿಸಿದ್ದರು.

ಆ ಬಳಿಕ ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಈವರೆಗೆ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ ಎಂದು ಪತ್ನಿ ಪೂಜಾ ಶೆಟ್ಟಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.