ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿ ಒಬ್ಬ ಅರೆಸ್ಟ್ ಮಾಡಲಾಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿ ಒಬ್ಬ ಅರೆಸ್ಟ್ ಆಗಿದ್ದು, ಹುಲಿ ಉಗುರು ಇರುವ ಪೆಂಡೆಂಟ್ ಧರಿಸಿದ್ದರು ಎಂಬ ಆರೋಪದ ಮೇಲೆ ಬಂಧನವಾಗಿದೆ. ಸದ್ಯ ಬಿಗ್ ಬಾಸ್ ಮನೆಯಿಂದ ಹೊರ ಕರೆತಂದು ಅರೆಸ್ಟ್ ಮಾಡಲಾಗಿದೆ.
ವರ್ತೂರು ಸಂತೋಷ್ ಅವರನ್ನು ರಾಮೋಹಳ್ಳಿ ಅರಣ್ಯಾಧಿಕಾರಿಗಳು ಬಂಧಿಸಿದ್ದು, ಸದ್ಯ ರಾಮೋಹಳ್ಳಿ ಅರಣ್ಯಾಧಿಕಾರಿಗಳ ಕಷ್ಟಡಿಯಲ್ಲಿದ್ದಾರೆ.
ವೈಲ್ಡ್ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಬಂಧನವಾಗಿದೆ. ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಹಾಕಿಕೊಂಡಿದ್ದರು. ಈ ಕುರಿತು ಎಫ್ಐಆರ್ ದಾಖಲಾಗಿತ್ತು. ಈ ಹಿನ್ನೆಲೆ ವರ್ತೂರು ಸಂತೋಷ್ ನನ್ನ ಬಂಧಿಸಿರುವ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಟಿವಿಯಲ್ಲಿ ಹುಲಿ ಉಗುರು ಪೆಂಡೆಂಟ್ ಹಾಕಿಕೊಂಡ ವಿಡಿಯೋ ಕೇಸ್ ಹಾಕಲಾಗಿದೆ. ಬಂಧಿತ ಸಂತೋಷ್ ಅವರನ್ನು ಕಗ್ಗಲಿಪುರ ಅರಣ್ಯ ಇಲಾಖೆ ಕಚೇರಿಯಲ್ಲಿಟ್ಟು ವಿಚಾರಿಸಲಾಗುತ್ತಿದೆ.
ಸದ್ಯ ಬಿಗ್ ಬಾಸ್ ವರ್ತೂರ್ ಸಂತೋಷ್ ವಿರುದ್ಧ ಜಾಮೀನು ರಹಿತ ಸೆಕ್ಷನ್ ಗಳ ಅಡಿಯಲ್ಲಿ ಎಫ್ ಐ ಆರ್ ದಾಖಲು ಮಾಡಲಾಗಿದೆ.
ಹಳ್ಳಿಕಾರ್ ತಳಿಯ ಜಾನುವಾರು ಸಾಕಾಣಿಕೆ ಮೂಲಕ ಜನಪ್ರಿಯತೆ ಪಡೆದಿರುವ ವರ್ತೂರು ಸಂತೋಷ್ ಹಳ್ಳಿಕಾರ್ ಕ್ಯಾಟಲ್ ಬ್ರೀಡ್ ಅಥವಾ ಅಖಿಲ ಭಾರತ ಹಳ್ಳಿಕಾರ್ ತಳಿ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಇವರು ಹಳ್ಳಿಕಾರ್ ಒಡೆಯ ಎಂದೇ ಪ್ರಸಿದ್ದಿ ಪಡೆದಿದ್ದರು.