ಅ. 28- 29 ರಂದು ವಿಶ್ವವೇ ಭಾಗವಹಿಸಲಿರುವ ವಿಶ್ವ ಬಂಟರ ಸಮ್ಮೇಳನಕ್ಕೆ ಭರದ ಸಿದ್ದತೆ

ಉಡುಪಿ: ವಿಶ್ವದಾದ್ಯಂತದ ಬಂಟರು ಒಂದೇ ವೇದಿಕೆಯಲ್ಲಿ ಭಾಗವಹಿಸಲಿರುವ ವಿಶ್ವ ಬಂಟರ ಸಮ್ಮೇಳನ-2023 ಕ್ಕೆ ಭರದ ಸಿದ್ದತೆಗಳು ನಡೆಯುತ್ತಿವೆ. ಅ.28 ರಂದು ಅಜ್ಜರಕಾಡು ಕ್ರೀಡಾಂಗಣದಲ್ಲಿ ವಿಶ್ವ ಬಂಟರ ಕ್ರೀಡಾಕೂಟ ಜರುಗಲಿದ್ದು, ಅ.29 ರಂದು ಅಮ್ಮಣ್ಣಿ ರಾಮಣ್ಣ ಶೆಟ್ತಿ ತೆರೆದ ಮೈದಾನದಲ್ಲಿ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮಗಳು ನಡೆಯಲಿದ್ದು, ಗುತ್ತಿನ ಶೈಲಿಯ ವೇದಿಕೆ ನಿರ್ಮಾಣ ಕಾರ್ಯ ನಡೆಯುತ್ತಿದೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಮಂತ್ರಿ ಡಾ. ಜಿ ಪರಮೇಶ್ವರ್, ರಾಜ್ಯ ಹಾಗೂ ಕೇಂದ್ರ ಸರಕಾರದ ಸಚಿವರು, ಸಂಸದರು, ಶಾಸಕರು, ವಿವಿಧ ಕ್ಷೇತ್ರಗಳ ಗಣ್ಯರು, ಕ್ರೀಡೆ ಮತ್ತು ಸಿನಿಮಾ ಕ್ಷೇತ್ರದ ಸಾಧಕರು ಭಾಗವಹಿಸಲಿದ್ದಾರೆ.

ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ, ಕ್ರೀಡೆ, ಮನೋರಂಜನಾ ಕಾರ್ಯಕ್ರಮಗಳು ಜರುಗಲಿವೆ.

ಬಂಟರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.