ಕುಂದಾಪುರ: ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳು ನಡೆಸಿದ ಕರ್ನಾಟಕ ನಾರ್ಥ್ ಜೋನಲ್ ಲೆವೆಲ್ ಪ್ರಬಂಧ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ಖಾರ್ವಿ ಇಂಗ್ಲೀಷ್ ಪ್ರಬಂಧದಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ.
ಈ ಸ್ಪರ್ಧೆಯನ್ನು ಸ್ಥಳೀಯ ಸಂಸ್ಥೆಯಾದ ಕುಂದಾಪುರದ ಶ್ರೀ ಸತ್ಯ ಸಾಯಿ ಸೇವಾ ಸಮಿತಿಯವರು ನಡೆಸಿರುತ್ತಾರೆ.
ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.