ಒಂದೇ ಕುಟುಂಬದ 7 ಜನ ಸಾವು : ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ

ರಾಜಸ್ಥಾನ: ಕಾರು ಮತ್ತು ಟ್ರೋಲಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಹನುಮಾನ್​ಗಡ್ ಜಿಲ್ಲೆಯಲ್ಲಿ ಶನಿವಾರ ಸಂಜೆ ಸಂಭವಿಸಿದೆ. ರಾಜಸ್ಥಾನದ ಹನುಮಾನ್​ಗಡ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಹಲವರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ

ಹನುಮಾನ್​ಗಡ್ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಎಸ್​ಪಿ ರಾಜೀವ್ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕಾರಿನಲ್ಲಿ 9 ಜನ ಪ್ರಯಾಣಿಸುತ್ತಿದ್ದರು. ಇದರಲ್ಲಿ ಏಳು ಜನ ಸಾವನ್ನಪ್ಪಿದ್ದಾರೆ. ಮೃತರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಓವರ್​ಟೇಕ್​ ಮಾಡುವಾಗ ಅಪಘಾತ ನಡೆದಿದೆ ಎಂದು ಹೇಳಲಾಗಿದೆ. ನಾಲ್ವರು ಮಹಿಳೆಯರು, ಇಬ್ಬರು ಪುರುಷರು ಹಾಗೂ ಒಂದು ಹೆಣ್ಣು ಮಗು ಸೇರಿ ಏಳು ಜನ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಇಲ್ಲಿನ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ದುರಂತದ ಬಳಿಕ ಟ್ರೋಲಿ ವಾಹನವನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.