ನವದೆಹಲಿ/ಬೆಂಗಳೂರು: ಈ ಹಿಂದೆ ಕಾವೇರಿ ನೀರು ನಿರ್ವಹಣಾ ಮಂಡಳಿ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ತಿಳಿಸಿತ್ತು. ಅಕ್ಟೋಬರ್ 16ರಿಂದ ಅಕ್ಟೋಬರ್ 31ರ ವರೆಗೆ ನೀರು ಹರಿಸುವಂತೆ ತಿಳಿಸಲಾಗಿತ್ತು.ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಆಘಾತ ಎದುರಾಗಿದೆ. ನವೆಂಬರ್ 1 ರಿಂದ 15 ರವರೆಗೆ ಪ್ರತಿದಿನ 2,600 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿ ಕರ್ನಾಟಕಕ್ಕೆ ಆದೇಶಿಸಿದೆ.ನವೆಂಬರ್ 1ರಿಂದ ನವೆಂಬರ್ 15ರ ವರೆಗೆ ತಮಿಳುನಾಡಿಗೆ ಪ್ರತಿದಿನ 2,600 ಕ್ಯೂಸೆಕ್ ನೀರು ಬಿಡಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್ಸಿ) ಕರ್ನಾಟಕಕ್ಕೆ ಆದೇಶ ನೀಡಿದೆ.