ನಗರ ಕೇಂದ್ರ ಗ್ರಂಥಾಲಯದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮ

ಉಡುಪಿ: ಉಡುಪಿ ನಗರ ಕೇಂದ್ರ ಗ್ರಂಥಾಲಯದ ಶಾಖೆ ಕವಿ ಮುದ್ದಣ ಮಾರ್ಗ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯದ ಸಪ್ತಾಹ- 2023 ಇದರ ಅಂಗವಾಗಿ ನ. 07 ರಂದು ಕಾಲೇಜು ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಮತ್ತು ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.

ಉಡುಪಿ ನಗರಸಭೆಯ ಪೌರಾಯುಕ್ತ ರಾಯಪ್ಪ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳು ಬಿಡುವಿನ ಸಮಯದಲ್ಲಿ ಮೊಬೈಲ್ ಬಳಕೆಯನ್ನು ಕಡಿಮೆ ಬಳಸಿ ಅತೀ ಹೆಚ್ಚು ಸಮಯವನ್ನು ಗ್ರಂಥಾಲಯದಲ್ಲಿ ವ್ಯಯಿಸಿ ಗತ ಕಾಲದ ಇತಿಹಾಸ, ವಿಜ್ಙಾನ, ಆತ್ಮಚರಿತ್ರೆ, ಸಾಹಿತ್ಯ, ಭೂಮಂಡಲಕ್ಕೆ ಸಂಬಂಧಿಸಿದ ಉತ್ತಮ ಪುಸ್ತಕಗಳನ್ನು ಓದಿ ತಮ್ಮ ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಂಡಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸುವಲ್ಲಿ ಸಹಕಾರಿಯಾಗುತ್ತದೆ ಎಂದರು.

ಉಡುಪಿ ಜಿಲ್ಲಾಡಳಿತದ ವತಿಯಿಂದ ಯು.ಪಿ.ಎಸ್.ಸಿ ಮತ್ತು ಕೆ.ಪಿ.ಎಸ್.ಸಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವಂತೆ ನಗರ ಸಭೆಯ ಸಭಾಂಗಣದಲ್ಲಿ ತರಬೇತಿಯನ್ನು ಆಯೋಜಿಸಲಾಗಿದ್ದು ಪ್ರತೀ ದಿನ ಸಂಜೆ 5.30 ರಿಂದ 7.30 ಯವರೆಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವರ್ಚುವಲ್ ತರಬೇತಿಯನ್ನು ನಡೆಸಲಾಗುತ್ತಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಅವರು ತಿಳಿಸಿದರು.

ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಗ್ರಂಥಪಾಲಕ ಸಿ. ನಿರೂಪಿಸಿದರು. ಗ್ರಂಥಾಲಯ ಸಹಾಯಕಿ ಸುನೀತಾ ಬಿ.ಎಸ್. ವಂದಿಸಿದರು.